Published
4 hours agoon
By
Akkare Newsಬೆಂಗಳೂರು: ಚಾಮರಾಜಪೇಟೆ ವಿನಾಯಕ ನಗರದಲ್ಲಿ ನಡೆದ ಹಸುವಿನ ಕೆಚ್ಚಲು ಕೊಯ್ದ ಪ್ರಕರಣದಲ್ಲಿ ಹಸುವಿನ ಮಾಲೀಕ ಕರ್ಣ ಅವರ ತಾಯಿ ಮತ್ತು ಸಹೋದರಿಗೆ ಸಚಿವ ಜಮೀರ್ ಅಹಮದ್ ಖಾನ್ ಮೂರು ಹಸು ಕೊಡಿಸಿದ್ದಾರೆ.
ಕರ್ಣ ಅವರು ಹಸು ಪಡೆಯಲು ಮೊದಲು ಒಪ್ಪಿಕೊಂಡಿದ್ದರೂ ಅನಂತರ ನಿರಾಕರಿಸಿದ್ದರು. ಅವರ ತಾಯಿ ಸವರಿ ಅಮ್ಮಳ್, ಸಹೋದರಿ ಅಮುದಾ ಹಸು ಪಡೆಯಲು ಒಪ್ಪಿದ್ದರಿಂದ ಅವರಿಗೆ ಸಚಿವ ಜಮೀರ್ ಅಹಮದ್ ಖಾನ್ ಸುಮಾರು ₹3 ಲಕ್ಷ ವೆಚ್ಚದಲ್ಲಿ ಮೂರು ಹಸು ಖರೀದಿಸಿ ಹಸ್ತಾಂತರಿಸಿದರು.
ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಕೆಎಂಡಿಸಿ ಅಧ್ಯಕ್ಷ ಅಲ್ತಾಫ್ ಖಾನ್, ಮುಖಂಡರಾದ ಅತುಶ್, ಗೌಸಿ, ವಿನಾಯಕ್, ಪ್ರಸಾದ್ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಅಮುದಾ ಮಾತನಾಡಿ, ಹಸು ನಿರಾಕರಿಸಿದ ನನ್ನ ಸಹೋದರನ ಪರವಾಗಿ ನಾನು ಕ್ಷಮೆ ಕೋರುತ್ತೇನೆ. ಜಮೀರಣ್ಣ ಅವರು ಒಳ್ಳೆ ಮನಸ್ಸಿನಿಂದ ಹಸು ಕೊಡಿಸಿದ್ದಾರೆ. ನಾವು ಶಾಸಕರ ಜತೆ ಇದ್ದೇವೆ’ ಎಂದು ತಿಳಿಸಿದರು.