ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಇತರ

ರಾಜ್ಯ ಸರ್ಕಾರದಿಂದ 3,352 ನರೇಗಾ ನೌಕರರಿಗೆ ವೈದ್ಯಕೀಯ ವಿಮೆ

Published

on

ಗ್ರಾಮೀಣಾಭಿವೃದ್ಧಿ ಆಯುಕ್ತಾಲಯ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಕಾರ್ಯಗತಗೊಳಿಸುತ್ತಿರುವ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಹೊರಗುತ್ತಿಗೆ ಆಧಾರದಲ್ಲಿ ಕಾರ್ಯ ನಿರ್ವಹಿಸುತ್ತಿರುವ 3,352 ಸಿಬ್ಬಂದಿಗಳಿಗೆ ಸಾಮೂಹಿಕ ವೈದ್ಯಕೀಯ ವಿಮೆ ಸೌಲಭ್ಯವನ್ನು ಒದಗಿಸಲು ಗುರುವಾರ ಸಚಿವ ಸಂಪುಟ ಒಪ್ಪಿಗೆ ನೀಡಿದೆ ಎಂದು ವರದಿಯಾಗಿದೆ.

ವಿಮೆಗಾಗಿ ಸಚಿವ ಸಂಪುಟ ಒಪ್ಪಿಗೆ ನೀಡಿದ್ದಿದ್ದು, ಅದಕ್ಕಾಗಿ ವಾರ್ಷಿಕ 8.34 ಕೋಟಿ ರೂ. ವೆಚ್ಚ ಮಾಡಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದು, ಮುಂದಿನ 3 ವರ್ಷಗಳಲ್ಲಿ ಈ ಯೋಜನೆ ಜಾರಿಗೊಳಿಸಲು ಅಂದಾಜು 2,514 ಲಕ್ಷ ರೂ ವೆಚ್ಚವಾಗಲಿದೆ ಎಂದು ಹೇಳಿದ್ದಾರೆ.

ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ರಾಜ್ಯ, ಜಿಲ್ಲೆ, ತಾಲ್ಲೂಕು, ಹಾಗೂ ಗ್ರಾಮ ಪಂಚಾಯತಿ ಮಟ್ಟದಲ್ಲಿ ಅನುಷ್ಠಾನ ಇಲಾಖೆಗಳಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಇ.ಎಸ್.ಐ. ಸೌಲಭ್ಯ ಹೊಂದಿರುವ ಸಿಬ್ಬಂದಿಗಳನ್ನು ಹೊರತುಪಡಿಸಿದಂತೆ ಉಳಿದ ಸಿಬ್ಬಂದಿಗಳಿಗೆ ಸಾಮೂಹಿಕ ವೈದ್ಯಕೀಯ ವಿಮೆ ಸೌಲಭ್ಯವನ್ನು ಒದಗಿಸಲಾಗುವುದು ಎಂದು ಸಚಿವ ಖರ್ಗೆ ಹೇಳಿದ್ದಾರೆ.

 

”ರಾಜ್ಯದಾದ್ಯಂತ ನರೇಗ ಯೋಜನೆಯನ್ನು ಅನುಷ್ಠಾನಗೊಳಿಸುವಲ್ಲಿ ಹೊರಗುತ್ತಿಗೆ ನೌಕರರು ನಿರ್ಣಾಯಕ ಪಾತ್ರ ವಹಿಸುತ್ತಾರೆ. ಈ ಆರೋಗ್ಯ ವಿಮಾ ಯೋಜನೆಯನ್ನು ಪರಿಚಯಿಸುವ ಮೂಲಕ, ನೌಕರರ ಆರೋಗ್ಯ ಮತ್ತು ಯೋಗಕ್ಷೇಮಕ್ಕಾಗಿ ಸುರಕ್ಷತಾ ಜಾಲವನ್ನು ಒದಗಿಸುವ ಗುರಿಯನ್ನು ಹೊಂದಲಾಗಿದೆ” ಎಂದು ಎಂದು ಅವರು ಹೇಳಿದ್ದಾರೆ.

“ಪ್ರಸ್ತುತ ರಾಜ್ಯ-ಚಾಲಿತ ಕಿಯೊನಿಕ್ಸ್ ಸಂಸ್ಥೆಯಲ್ಲಿ ಹೊರಗುತ್ತಿಗೆ ಸಿಬ್ಬಂದಿಗೆ ಇದೇ ರೀತಿಯ ಗುಂಪು ಆರೋಗ್ಯ ವಿಮಾ ಯೋಜನೆ ಜಾರಿಯಲ್ಲಿದೆ. ನೌಕರರ ಆರೋಗ್ಯ ಭದ್ರತೆಯನ್ನು ಗಮನದಲ್ಲಿರಿಸಿಕೊಂಡು ಸಾಧಾರಣ ವೇತನಕ್ಕಾಗಿ ದೈಹಿಕವಾಗಿ ಬೇಡಿಕೆಯ ಕೆಲಸಗಳನ್ನು ಮಾಡುವಲ್ಲಿ ನಿರತರಾಗಿರುವ ನರೇಗ ನೌಕರರಿಗೂ ವೈದ್ಯಕೀಯ ವಿಮೆ ಸೌಲಭ್ಯವನ್ನು ವಿಸ್ತರಿಸಲಾಗಿದೆ” ಎಂದೂ ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ.

 

 

 

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version