Connect with us

ರಾಜಕೀಯ

ಆಂಧ್ರಪ್ರದೇಶದಲ್ಲಿ ಎರಡಕ್ಕಿಂತ ಹೆಚ್ಚು ಮಕ್ಕಳಿದ್ದವರಿಗೆ ಬಿಗ್ ಶಾಕ್…. ಚುನಾವಣೆಗೆ ಅನರ್ಹ ಮಾಡುವ ಬಗ್ಗೆ ಹೊಸ ನೀತಿಗೆ ಚಿಂತನೆ….

Published

on

ತಿರುಪತಿ: ಆಂಧ್ರಪ್ರದೇಶದ ಜನಸಂಖ್ಯೆ ನಿರಂತರ ಕುಸಿತ ಕಾಣುತ್ತಿದೆ. ರಾಜ್ಯದ ಜನತೆ ಅಧಿಕ ಮಕ್ಕಳನ್ನು ಹೊಂದಬೇಕೆಂದು ಪ್ರತಿಪಾದಿಸುತ್ತಿರುವ ಆಂಧ್ರಪ್ರದೇಶದ ಸಿಎಂ ಚಂದ್ರಬಾಬು ನಾಯ್ಡು ಅವರು ಇದೀಗ ಎರಡಕ್ಕಿಂತ ಕಡಿಮೆ ಮಕ್ಕಳನ್ನು ಹೊಂದಿರುವವರು ಪುರಸಭೆ ಹಾಗೂ ಪಂಚಾಯತ್ ಚುನಾವಣೆಗಳಲ್ಲಿ ಸ್ಪರ್ಧಿಸುವುದರಿಂದ ನಿರ್ಬಂಧಿಸುವ ಹೊಸ ನೀತಿಯನ್ನು ತರಲು ಚಿಂತನೆ ನಡೆಸಿದ್ದಾರೆ. ಎರಡಕ್ಕಿಂತ ಅಧಿಕ ಮಕ್ಕಳಿದ್ದವರು ಸ್ಥಳೀಯ ಚುನಾವಣೆಯಲ್ಲಿ ಸ್ಪರ್ಧಿಸಲು ಹೇರಿದ್ದ ನಿರ್ಬಂಧವನ್ನು ಸಿಎಂ ನಾಯ್ಡು ಸರ್ಕಾರ ರದ್ದುಪಡಿಸಿದ ಬೆನ್ನಲ್ಲೇ ಈ ಸುದ್ದಿ ಹೊರಬಿದ್ದಿದೆ.


ಪರಿವಾರದೊಂದಿಗೆ ಸಂಕ್ರಾಂತಿ ಆಚರಿಸಿ ಮಾತನಾಡಿದ ನಾಯ್ಡು, ‘ಕಡಿಮೆ ಮಕ್ಕಳಿರುವವರಿಗೆ ಚುನಾವಣೆಗಳಲ್ಲಿ ಸ್ಪರ್ಧಿಸಲು ಅನುಮತಿಸಲಾಗುವುದಿಲ್ಲ. ಎರಡಕ್ಕಿಂದ ಅಧಿಕ ಮಕ್ಕಳಿರುವವರು ಮಾತ್ರ ಸರಪಂಚ್‌, ಪುರಸಭೆ ಸದಸ್ಯ ಅಥವಾ ಮೇಯರ್‌ ಆಗಬಹುದು.  ಅಂಥವರಿಗೆ, ಸದ್ಯ ಪ್ರತಿ ಕುಟುಂಬಕ್ಕೆ ನೀಡಲಾಗುತ್ತಿರುವ 25 ಕೆಜಿ ಸಬ್ಸಿಡಿ ಅಕ್ಕಿಯ ಪ್ರಮಾಣವನ್ನು ಹೆಚ್ಚಿಸುವ ನಿಟ್ಟಿನಲ್ಲಿಯೂ ಕೆಲಸ ಮಾಡುತ್ತಿದ್ದೇವೆ’ ಎಂದರು.

ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಳ್ಳಲು ಜನಸಂಖ್ಯೆ ಕುಸಿತ ಸಮಸ್ಯೆಯೊಂದಿಗೆ ಸೆಣಸುತ್ತಿರುವ ದೇಶಗಳ ಉದಾಹರಣೆ ನೀಡುತ್ತಾ, ‘ಜಪಾನ್‌, ಕೊರಿಯಾ ಸೇರಿದಂತೆ ಅನೇಕ ಐರೋಪ್ಯ ದೇಶಗಳು ಕುಟುಂಬ ಯೋಜನೆ ನೀತಿಯನ್ನು ಅನುಸರಿಸಿದ ಕಾರಣ ಈಗ ಅಲ್ಲಿ ವಯಸ್ಸಾದವರ ಜನಸಂಖ್ಯೆಯೇ ಹೆಚ್ಚಾಗಿದೆ. ಇದು ಭಾರತಕ್ಕೂ ಎಚ್ಚರಿಕೆಯ ಕರೆಗಂಟೆಯಾಗಿದೆ. ಈಗಲೇ ಸರಿಯಾದ ನೀತಿಗಳನ್ನು ತಂದರೆ ಬಚಾವಾಗಬಹುದು’ ಎಂದರು.

 

2 ಮಕ್ಕಳ ನೀತಿಯನ್ನು ಕಟ್ಟುನಿಟ್ಟಾಗಿ ಪಾಲಿಸಿದ್ದ ದಕ್ಷಿಣ ರಾಜ್ಯಗಳ ಫಲವತ್ತತೆ ದರ 1.73 ಇದ್ದು, ಇದು ದೇಶದ ಸರಾಸರಿಯಾದ 2.1ಕ್ಕಿಂತ ಕಡಿಮೆಯಿದೆ. ಉತ್ತರ ಪ್ರದೇಶ, ಮಧ್ಯಪ್ರದೇಶ, ಬಿಹಾರ, ರಾಜಸ್ಥಾನ ಹಾಗೂ ಜಾರ್ಖಂಡ್‌ಗಳಲ್ಲಿ ಇದು 2.4ರಷ್ಟಿದೆ.

 

 

 

 

Continue Reading
Click to comment

Leave a Reply

Your email address will not be published. Required fields are marked *

Advertisement