Connect with us

ರಾಜಕೀಯ

ದತ್ತಪೀಠ ಬಾಬಾಬುಡನ್ ದರ್ಗಾ ವಿವಾದ ಶಾಶ್ವತವಾಗಿ ಬಗೆಹರಿಸುತ್ತೇವೆ: ಗೃಹ ಸಚಿವ ಪರಮೇಶ್ವರ

Published

on

ಚಿಕ್ಕಮಗಳೂರಿನ ಇನಾಂ ದತ್ತಾತ್ರೇಯ ಪೀಠ ಬಾಬಾ ಬುಡನ್‌ಗಿರಿ ದರ್ಗಾ ವಿವಾದವನ್ನು ಶಾಶ್ವತವಾಗಿ ಬಗೆಹರಿಸಲು ಸರ್ಕಾರ ಚಿಂತನೆ ನಡೆಸಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಶುಕ್ರವಾರ ಹೇಳಿದ್ದಾರೆ. ಕರ್ನಾಟಕಕ್ಕೆ ದೇಶದಲ್ಲಿ ಒಳ್ಳೆಯ ಹೆಸರಿದ್ದು, ಈ ಸಮಸ್ಯೆಯನ್ನು ಹೆಚ್ಚು ದಿನ ಮುಂದಕ್ಕೆ ತೆಗೆದುಕೊಂಡು ಹೋಗುವುದು ಒಳ್ಳೆಯದಲ್ಲ ಎಂದು ಅವರು ಪ್ರತಿಪಾದಿಸಿದ್ದಾರೆ. ದತ್ತಪೀಠ ಬಾಬಾಬುಡನ್ ದರ್ಗಾಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್‌ನಲ್ಲಿ ಸಲ್ಲಿಕೆಯಾಗಿರುವ ವಿಶೇಷ ಅರ್ಜಿ ಕುರಿತು ಚಿಕ್ಕಮಗಳೂರು ಜಿಲ್ಲೆಯ ಶಾಸಕರು, ಜನಪ್ರತಿನಿಧಿಗಳು ಹಾಗೂ ಧಾರ್ಮಿಕ ಮುಖಂಡರುಗಳೊಂದಿಗೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಪರಮೇಶ್ವರ ಅವರು ಶುಕ್ರವಾರ ಸಮಾಲೋಚನಾ ಸಭೆ ನಡೆಸಿದ್ದಾರೆ.


“ದಾಖಲೆಗಳು ಶಾಶ್ವತವಾಗಿ ಇರುವಂತಹವು.‌ ಈ ವಿಚಾರದಲ್ಲಿ ಕಾನೂನಿನ ಸಲಹೆ ಪಡೆಯಬೇಕಾಗುತ್ತದೆ. ಕರ್ನಾಟಕಕ್ಕೆ ದೇಶದಲ್ಲಿ ಒಳ್ಳೆಯ ಹೆಸರಿದೆ. ಈ ಸಮಸ್ಯೆಯನ್ನು ಹೆಚ್ಚು ದಿನ ಮುಂದಕ್ಕೆ ತೆಗೆದುಕೊಂಡು ಹೋಗುವುದು ಒಳ್ಳೆಯದಲ್ಲ. ಅಲ್ಲಿ ಶಾಂತಿ ಸಾಮರಸ್ಯ ನೆಲೆಸುವಂತೆ‌ ಮಾಡಬೇಕು. ಈ ಸಮಸ್ಯೆಯನ್ನು ಶಾಶ್ವತವಾಗಿ ಬಗೆಹರಿಸಬೇಕು ಎಂದು ಸರ್ಕಾರ ತೀರ್ಮಾನ ಮಾಡಿದೆ” ಎಂದು ಅವರು ಸಭೆಯಲ್ಲಿ ತಿಳಿಸಿದ್ದಾರೆ.

ಹಿಂದು, ಮುಸ್ಲಿಂ ಸಮುದಾಯದವರು ಕೋರ್ಟ್ ಮೆಟ್ಟಿಲು ಹತ್ತಿದ್ದಾರೆ. ಸಮಿತಿ, ಸಚಿವ ಸಂಪುಟ ಉಪ ಸಮಿತಿಗಳನ್ನು ರಚಿಸಿ ದಾಖಲೆಗಳನ್ನು ಪರಿಶೀಲಿಸಿ ಕೋರ್ಟ್‌ಗೆ ತಿಳಿಸಲಾಗಿದ್ದು, ತೀರ್ಪುಗಳು ಬಂದಿವೆ. ಕೆಲವರು ಸುಪ್ರೀಂಕೋರ್ಟ್‌ ಮೊರೆ ಹೋಗಿದ್ದಾರೆ ಎಂದು ಅವರು ತಿಳಿಸಿದ್ದಾರೆ.

 

 

 

 

Continue Reading
Click to comment

Leave a Reply

Your email address will not be published. Required fields are marked *

Advertisement