Published
3 months agoon
By
Akkare Newsಕರ್ನಾಟಕ ವಿಧಾನಸಭೆಯ ಸ್ಪೀಕರ್ ಯುಟಿ ಖಾದರ್ ಅವರು ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳಕ್ಕೆ ಭೇಟಿ ನೀಡಿ, ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿದರು. ನಾಗಾ ಸಾಧುಗಳು ಮತ್ತು ಅಘೋರಿಗಳನ್ನು ಭೇಟಿ ಮಾಡಿ, ಭಾರತದ ವೈವಿಧ್ಯಮಯ ಸಂಸ್ಕೃತಿಯನ್ನು ಕಣ್ತುಂಬಿಕೊಂಡರು.
ಕರ್ನಾಟಕ ವಿಧಾನಸಭೆಯ ಸ್ಪೀಕರ್ ಯುಟಿ ಖಾದರ್ ಶುಕ್ರವಾರ ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯತ್ತಿರಯವ ಮಹಾ ಕುಂಭಮೇಳಕ್ಕೆ ಭೇಟಿ ನೀಡಿದ್ದಾರೆ.
ತಮ್ಮ ಸ್ನೇಹಿತರೊಂದಿಗೆ ಪ್ರಯಾಗ್‌ರಾಜ್ ಕುಂಭಮೇಳಕ್ಕೆ ಹೋಗಿರುವ ಯುಟಿ ಖಾದರ್ ಸಂಗಮಕ್ಷೇತ್ರದಲ್ಲಿ ತೀರ್ಥ ಸ್ನಾನ ಮಾಡಿರುವ ಫೋಟೋಗಳನ್ನು ಹಂಚಿಕೊಂಡಿದ್ದಾರೆ.
ಅದರೊಂದಿಗೆ ಪ್ರಯಾಗ್‌ರಾಜ್‌ನಲ್ಲಿ ವಿವಿಧ ನಾಗಾಸಾಧುಗಳು ಹಾಗೂ ಅಘೋರಿಗಳನ್ನು ಭೇಟಿ ಮಾಡಿದ ಚಿತ್ರಗಳನ್ನು ಕೂಡ ಹಂಚಿಕೊಂಡಿದ್ದಾರೆ.