Published
3 months agoon
By
Akkare Newsಮಂಗಳೂರು/ ನವದೆಹಲಿ : ಇಸ್ರೋ ಮತ್ತೊಂದು ಐತಿಹಾಸಿಕ ಮೈಲಿಗಲ್ಲಿಗೆ ಅಣಿಯಾಗಿದೆ. ಜನವರಿ 29 ರಂದು ಭಾರತೀಯ ಬಾಹ್ಯಾಕಾಶ ಸಂಸ್ಥೆ ಇಸ್ರೋದ 100 ನೇ ರಾಕೆಟ್ ಉಡಾವಣೆಗೆ ಸಿದ್ಧತೆ ನಡೆದಿದೆ. ಜನವರಿ 29 ರಂದು ಬೆಳಿಗ್ಗೆ 6.23ಕ್ಕೆ ಶ್ರೀಹರಿಕೋಟಾದಿಂದ 2,250 ಕೆಜಿ ನ್ಯಾವಿಗೇಷನ್ ಉಪಗ್ರಹವನ್ನು ಜಿಎಸ್‌ಎಲ್‌ವಿ – ಎಫ್ 15 ರ ಮೂಲಕ ಕಳುಹಿಸಲು ಸಜ್ಜಾಗಿರುವ ಬಗ್ಗೆ ಇಸ್ರೋ ಮಾಹಿತಿ ನೀಡಿದೆ.
ಇದು ಜಿಎಸ್‌ಎಲ್‌ವಿ ಉಡಾವಣಾ ವಾಹನದ 17ನೇ ಹಾರಾಟವಾಗಲಿದ್ದು, 19 ನಿಮಿಷಗಳಲ್ಲಿ ಉಪಗ್ರಹವನ್ನು ಕಕ್ಷೆಗೆ ಕೂರಿಸುವ ಯೋಜನೆ ರೂಪಿಸಲಾಗಿದೆ. ಈ ಕಾರ್ಯಾಚರಣೆಯ ಅಡಿ ಎನ್‌ವಿಎಸ್ – 02 ಉಪಗ್ರಹವನ್ನು ಉಡಾವಣೆ ಮಾಡಲಾಗುವುದು. ಇದು ಭಾರತದ ಪ್ರಾದೇಶಿಕ ನ್ಯಾವಿಗೇಷನ್ ವಿದ್ ಇಂಡಿಯನ್ ಕಾನ್‌ಸ್ಟೆಲೇಷನ್(NavIc) ಸಿಸ್ಟಮ್‌ನ್ನು ಮತ್ತಷ್ಟು ಬಲಪಡಿಸಲಿದೆ.
ನ್ಯಾವಿಗೇಶನ್ ವಿದ್ ಇಂಡಿಯನ್ ಕಾನ್‌ಸ್ಟೆಲೇಷನ್ (NavIc) ಭಾರತದ ಸ್ವತಂತ್ರ ಪ್ರಾದೇಶಿಕ ನ್ಯಾವಿಗೇಷನ್ ಉಪಗ್ರಹ ವ್ಯವಸ್ಥೆಯಾಗಿದೆ. ಭಾರತದ ಬಳಕೆದಾರರಿಗೆ ನಿಖರವಾದ ಸ್ಥಾನ, ವೇಗ ಮತ್ತು ಸಮಯ (PVT) ಸೇವೆಯನ್ನು ಒದಗಿಸುವ ಜೊತೆಗೆ ಮಿಲಿಟರಿ ಮತ್ತು ಇತರೆ ನ್ಯಾವಿಗೇಷನ್ ಆಧಾರಿತ ಸೇವೆ ಒದಗಿಸಲಿದೆ.