Published
3 months agoon
By
Akkare Newsಮಂಗಳೂರು: ಮಂಗಳೂರು ಪೊಲೀಸರು ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ನಲ್ಲಿ ನಡೆದ ದರೋಡೆ ಕೇಸ್ ಅನ್ನು ಬೇಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಈ ದರೋಡೆ ಪ್ರಕರಣವು ರಾಷ್ಟ್ರಮಟ್ಟದಲ್ಲಿ ಸಂಚಲನ ರೂಪಿಸಿತ್ತು. ಸುಮಾರು 14 ಕೋಟಿ ರೂಪಾಯಿ ಬೆಲೆ ಬಾಳುವ ಚಿನ್ನಾಭರಣಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಹೀಗಾಗಿ ಈ ಪ್ರಕರಣವನ್ನು ಬೇಧಿಸಿದ ಪೊಲೀಸರ ಸಾಹಸ ಮೆಚ್ಚುವಂತದ್ದಾಗಿದೆ. ಈ ದರೋಡೆಯನ್ನು ಮಾಡಲು 6 ತಿಂಗಳಿನಿಂದ ದರೋಡೆಕೋರರು ಪ್ಲಾನ್ ಮಾಡಿದ್ದರು.
ದರೋಡೆ ಮಾಡಿದ ಮುರುಗಂಡಿ ಥೇವರ್ ಹಾಗೂ ಯೊಸುವಾ ರಾಜೇಂದ್ರನ್ ಫಿಯಟ್ ಕಾರಿನಲ್ಲಿ ತಲಪಾಡಿ ಗೇಟಿನಿಂದ ಕೇರಳ ಕಡೆಗೆ ಪರಾರಿಯಾಗಿದ್ದರು. ಈ ತಂಡ ತಮಿಳುನಾಡಿಗೆ ಪರಾರಿಯಾಗಲು ಯೋಚಿಸಿದ್ದರೆ, ಉಳಿದ 4 ಆರೋಪಿಗಳು ಮಂಗಳೂರು ರೈಲು ನಿಲ್ದಾಣಕ್ಕೆ ಬಂದು ಅಲ್ಲಿಂದ ಮೂವರು ಆಟೋ ಮೂಲಕ ಹಾಗೂ ಒಬ್ಬ ಬಸ್ಸಿನಲ್ಲಿ ಪ್ರಯಾಣಿಸಿ ಎಸ್ಕೇಪ್ ಆಗಿದ್ದಾರೆ. ಬ್ಯಾಂಕಿನಿಂದ ದರೋಡೆ ಮಾಡಿದ ಚಿನ್ನವನ್ನು ಮುಂಬೈನ ಕಪ್ಪು ಮಾರುಕಟ್ಟೆಯಲ್ಲಿ ಮಾರಾಟ ಮಾಡಲು ಪ್ಲಾನ್ ಮಾಡಿದ್ದರು.
ಸಹಕಾರಿ ಬ್ಯಾಂಕಿನಿಂದ 2,265 ಬಳೆ, ಓಲೆ, ಸರ ಸೇರಿ ಇತರೆ ಚಿನ್ನಾಭರಣಗಳನ್ನು ದೋಚಿದ್ದರು. ಪೊಲೀಸರು ತನಿಖೆಯನ್ನು ಮಾಡುವ ವೇಳೆ ಚಿನ್ನದ ರಾಶಿಯನ್ನು ಕಂಡು ದಂಗಾಗಿದ್ದಾರೆ. ದರೋಡೆಕೋರರು 4 ಬ್ಯಾಗ್ನಲ್ಲಿ 14 ಕೋಟಿ ಮೌಲ್ಯದ 18.314 ಕೆ.ಜಿಯ ಚಿನ್ನಾಭರಣಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಇದರ ಜೊತೆಗೆ ಕೃತ್ಯಕ್ಕೆ ಬಳಸಿರುವ ಫಿಯಟ್ ಕಾರು, 2 ಮಚ್ಚುಗಳು, 2 ಪಿಸ್ತೂಲು, 3 ಜೀವಂತ ಗುಂಡುಗಳನ್ನು ವಶಕ್ಕೆ ಪಡೆಯಲಾಗಿದೆ. ಇನ್ನು ಬಂಧಿತರಿಂದ 3.80 ಲಕ್ಷ ನಗದು ವಶಕ್ಕೆ ತೆಗೆದುಕೊಂಡಿದ್ದಾರೆ.
ಜ.17 ರಂದು ಈ ಘಟನೆ ನಡೆದಿದ್ದು, ಪ್ರಕರಣದ ಪ್ರಮುಖ ಆರೋಪಿ ಮುಂಬೈಯ ಪದ್ಮನೇರಿ ಗ್ರಾಮದ ಮುರುಗುಂಡಿ ಥೇವರ್ (36), ದೊಂಬಿವಲಿ ವೆಸ್ಟ್‌ನ ಯೊಸುವಾ ರಾಜೇಂದ್ರನ್ (35), ಕಣ್ಣನ್ ಮಣಿ, ಷಣ್ಣುಗ ಸುಂದರಂ ಎಂಬುವರನ್ನು ಅರೆಸ್ಟ್ ಮಾಡಿದ್ದೇವೆ ಎಂದು ಕಮಿಷನರ್ ಅನುಪಮ್ ಅಗರ್ವಾಲ್ ಮಾತನಾಡಿದ್ದಾರೆ.