Published
2 months agoon
By
Akkare Newsಪುತ್ತೂರು: ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಶ್ರೀಮಹಿಷಮರ್ದಿನಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ನೂತನ ಅಧ್ಯಕ್ಷರಾಗಿ ಎಂ. ನಿರಂಜನ ರೈ ಮಠಂತಬೆಟ್ಟು ಮೂರನೇ ಬಾರಿಗೆ ಆಯ್ಕೆಯಾಗಿದ್ದಾರೆ.
ದೇವಸ್ಥಾನದಲ್ಲಿ ಜ.೨೭ರಂದು ನಡೆದ ಸಮಿತಿ ಸದಸ್ಯರ ಸಭೆಯಲ್ಲಿ ನಿರಂಜನ ರೈಯವರನ್ನು ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಯಿತು. ಸದಸ್ಯರಾದ ಕೇಶವ ಭಂಡಾರಿ ಕೈಪ, ಕುಮಾರನಾಥ ಪಲ್ಲತ್ತಾರು, ಸತೀಶ್ ನಾಯಕ್ ಮೋನಡ್ಕ, ದೇವದಾಸ ಗೌಡ ಪಿಲಿಗುಂಡ, ವಿಜಯ ನಾಯ್ಕ ಲಿಂಗಪಾಲು, ರೇಣುಕಾ ಎಂ.ರೈ ಮಠಂತಬೆಟ್ಟು, ಯಮುನಾ ಪುರುಷೋತ್ತಮ ಪೂಜಾರಿ ಡೆಕ್ಕಾಜೆ, ಪ್ರಧಾನ ಅರ್ಚಕ ರಾಮಕೃಷ್ಣ ಭಟ್ ಉಪಸ್ಥಿತರಿದ್ದರು.ಶರಣ್ಯ ಕಂದಾಯ ಅಧಿಕಾರಿ ಮತ್ತು ದೇವಸ್ಥಾನ ದ ಕಾರ್ಯನಿರ್ವಾಹಕ ಅಧಿಕಾರಿ ಕೋಡಿಂಬಾಡಿ ಚುನಾವಣೆ ನಡೆಸಿ ಕೊಟ್ಟರು
ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ನಿವಾಸಿಯಾಗಿರುವ ನಿರಂಜನ ರೈಯವರು ಭೂ ನ್ಯಾಯ ಮಂಡಳಿ ಸದಸ್ಯರಾಗಿ, ಬನ್ನೂರು ರೈತರ ಸೇವಾ ಸಹಕಾರಿ ಸಂಘದ ನಿರ್ದೇಶಕರಾಗಿ, ಜಿಲ್ಲಾ ಕಂಬಳ ಸಮಿತಿ ತೀರ್ಪುಗಾರರಾಗಿ, ಉಪ್ಪಿನಂಗಡಿ ವಿಜಯ-ವಿಕ್ರಮ ಕಂಬಳ ಸಮಿತಿ ಗೌರವ ಸಲಹೆಗಾರರಾಗಿ, ಪುತ್ತೂರು ಕೋಟಿ-ಚೆನ್ನಯ ಕಂಬಳ ಸಮಿತಿಯ ಉಪಾಧ್ಯಕ್ಷರಾಗಿ, ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ಸೇವಾ ಟ್ರಸ್ಟ್‌ನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಸದಸ್ಯರಾಗಿರುವ ಇವರು ಉತ್ತಮ ಕಾರ್ಯಕ್ರಮ ನಿರೂಪಕರಾಗಿ ನಾಟಕ ಕಲಾವಿದರಾಗಿ ನಾಟಕ ರಚನೆಕಾರರಾಗಿಯೂ ಗುರುತಿಸಿಕೊಂಡಿದ್ದಾರೆ.