Published
2 months agoon
By
Akkare Newsಶ್ರೀ ಗುರುದೇವ ಅಧ್ಯಾತ್ಮ ಕೇಂದ್ರ ಲೋಕಾರ್ಪಣೆ, ರಥೋತ್ಸವ, ತುಳುಸಿರಿ ಪ್ರಶಸ್ತಿ ಪ್ರದಾನ
ಪುತ್ತೂರು: ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದಲ್ಲಿ ಶ್ರೀ ಒಡಿಯೂರು ರಥೋತ್ಸವ ತುಳುನಾಡ ಜಾತ್ರೆ ಅಂಗವಾಗಿ ಶ್ರೀ ಗುರುದೇವ ಅಧ್ಯಾತ್ಮ ಕೇಂದ್ರ ಲೋಕಾರ್ಪಣೆ, ತುಳು ಸಾಹಿತ್ಯ ಸಮ್ಮೇಳನವು ಫೆ. 6 ಮತ್ತು 7 ರಂದು ನಡೆಯಲಿದೆ.
6-2-2025 ರಂದು ಬೆಳಗ್ಗೆ 10ಕ್ಕೆ ಶ್ರೀ ಗುರುದೇವ ಅಧ್ಯಾತ್ಮ ಕೇಂದ್ರ ಲೋಕಾರ್ಪಣೆ ನಡೆಯಲಿದ್ದು, ದೀಪೋಜ್ವಲನವನ್ನು ಶ್ರೀ ಗುರುದೇವಾನಂದ ಸ್ವಾಮೀಜಿ ನಡೆಸಲಿದ್ದಾರೆ. ಸಾಧ್ವಿ ಮಾತಾನಂದಮಯೀ ದಿವ್ಯ ಸಾನ್ನಿಧ್ಯ ವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಶಾಸಕ ರಾಜೇಶ್ ನಾಕ್, ಭಾಗೀರಥಿ ಮುರುಳ್ಯ, ಜಮೈಕಾ ವೈದ್ಯ ಡಾ.ರಮಾನಂದ ಶೆಟ್ಟಿ, ಉದ್ಯಮಿಗಳಾದ ರಘುನಾಥ ಸೋಮಯಾಜಿ, ಸದಾಶಿವ ಶೆಟ್ಟಿ ಕೂಳೂರು ಕನ್ಯಾನ, ಬರೋಡ ಶಶಿಧರ ಬಿ ಶೆಟ್ಟಿ, ವಾಮಯ್ಯ ಬಿ ಶೆಟ್ಟಿ, ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧಕ್ಷ ಹರೀಶ್ ಶೆಟ್ಟಿ ಐಕಳ, ಕಣಂಜಾರ್ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಕಣಂಜಾರ್ ವಿಕ್ರಮ ಹೆಗ್ಡೆ, ಮುಂಬೈ ಗುರುದೇವ ಸೇವಾ ಬಳಗದ ಅಧ್ಯಕ್ಷ ದಾಮೋದರ ಎಸ್. ಶೆಟ್ಟಿ, ಸಂಪತ್ ಕುಮಾರ್ ಶೆಟ್ಟಿ, ಡಾ.ಅದಿಪ್ ಕೆ. ಶೆಟ್ಟಿ, ಸಂತೋಷ್ ಹೆಗ್ಡೆ, ದಯಾನಂದ ಹೆಗ್ಡೆ, ಭರತ್ ಭೂಷಣ್, ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ ಎ. ಸುರೇಶ್ ರೈ ಉಪಸ್ಥಿತರಿರುವರು.
ಮಧ್ಯಾಹ್ನ 2ರಿಂದ ತುಳು ಸಾಹಿತ್ಯ ಸಮ್ಮೇಳನ ನಡೆಯಲಿದ್ದು, ಕಾರ್ಯಕ್ರಮವನ್ನು ಶ್ರೀ ಗುರುದೇವಾನಂದ ಸ್ವಾಮೀಜಿ ಉದ್ಘಾಟಿಸಲಿದ್ದಾರೆ. ಸಾಹಿತಿ ಭಾಸ್ಕರ ರೈ ಕುಕ್ಕುವಳ್ಳಿ ಅಧ್ಯಕ್ಷತೆ ವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಅಖಿಲ ಭಾರತ ತುಳು ಒಕ್ಕೂಟದ ಅಧ್ಯಕ್ಷ ಎ.ಸಿ. ಭಂಡಾರಿ, ಧಾರ್ಮಿಕ ಪರಿಷತ್ ಸದಸ್ಯೆ ಮಲ್ಲಿಕಾ ಪ್ರಶಾಂತ್ ಪಕಳ, ತುಳುನಾಡ ರಕ್ಷಣಾ ವೇದಿಕೆ ಅಧ್ಯಕ್ಷ ಯೋಗೀಶ್ ಶೆಟ್ಟಿ ಜಪ್ಪು ಉಪಸ್ಥಿತರಿರುವರು. ತುಳುಪು ಕಾರ್ಯಕ್ರಮದಲ್ಲಿ ಸಂಶೋಧಕ ಡಾ.ಎಸ್.ಆರ್.ಅರುಣ್ ಕುಮಾರ್, ಪ್ರಾಂಶುಪಾಲ ಡಾ.ನವೀನ್ ಕುಮಾರ್ ಮರಿಕೆ, ಮಲ್ಲಿಕಾ ಜೆ. ರೈ ವಿಚಾರ ಮಂಡಿಸಲಿದ್ದಾರೆ. ಕರ್ಗಿ ಶೆಡ್ತಿ ಅಳದಂಗಡಿ, ಪುಷ್ಪರಾಜ ರೈ ಮಲಾರು ಬೀಡು, ಹರೀಶ್ ಶೆಟ್ಟಿ ಮಾಡ, ಕೃಷ್ಣಪ್ಪ ಪುರುಷ ಕೇಪು, ಪ್ರವೀಣ್ ರೈ ನಡುಕೂಟೇಲು ಅವರಿಗೆ ತುಳುಸಿರಿ ಪ್ರಶಸ್ತಿ ಪ್ರದಾನ ನಡೆಯಲಿದೆ. ಸಂಜೆ 6 ರಿಂದ ಪಾವಂಜೆ ಮೇಳದಿಂದ ಯಕ್ಷಗಾನ ಬಯಲಾಟ ನಡೆಯಲಿದೆ.
7-2-2025 ರಂದು ಶ್ರೀ ಒಡಿಯೂರು ರಥೋತ್ಸವ – ತುಳುನಾಡ ಜಾತ್ರೆ ನಡೆಯಲಿದ್ದು, ಬೆಳಗ್ಗೆ 9ಕ್ಕೆ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ನಡೆದು ಬಳಿಕ 10:30ಕ್ಕೆ ಮಹಾಮಂಗಳಾರತಿ ಬಳಿಕ 11:00ರಿಂದ ಧರ್ಮಸಭೆ ನಡೆಯಲಿದೆ. ಶ್ರೀ ಗುರುದೇವಾನಂದ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ. ಸಾಧ್ವಿ ಮಾತಾನಂದಮಯೀ ದಿವ್ಯ ಸಾನ್ನಿಧ್ಯ ವಹಿಸಲಿರುವರು. ಕಾರ್ಯಕ್ರಮದಲ್ಲಿ ಮಂಗಳೂರು ವಿಮಾನ ನಿಲ್ದಾಣದ ಸೀನಿಯರ್ ಕಮಾಂಡೆಂಟ್ ವೀರೇಂದ್ರ ಮೋಹನ್ ಜೋಶಿ, ಆಕಾಶವಾಣಿ ಸಹಾಯಕ ನಿರ್ದೇಶಕ ಪಿ.ಎಸ್.ಸೂರ್ಯನಾರಾಯಣ ಭಟ್, ಡಾ.ಅವಿನ್ ಆಳ್ವ, ರಾಮಪ್ರಸಾದ್, ಯಕ್ಷದ್ರುವ ಪಟ್ಲ ಫೌಂಡೇಷನ್ ಸ್ಥಾಪಕಾಧ್ಯಕ್ಷ ಸತೀಶ್ ಶೆಟ್ಟಿ ಪಟ್ಲ, ಬಾಲಕೃಷ್ಣ ಎಂ. ರೈ, ಪುಣೆ ಗುರುದೇವ ಸೇವಾ ಬಳಗ ಅಧ್ಯಕ್ಷ ಪ್ರಭಾಕರ ಶೆಟ್ಟಿ, ಜಿತೇಂದ್ರ ಎಸ್. ಕೊಟ್ಟಾರಿ, ಶ್ವೇತಾ ಸಿ. ರೈ, ಜಯಲಕ್ಷ್ಮೀ ಪಿ. ಶೆಟ್ಟಿ ಭಾಗವಹಿಸಲಿದ್ದಾರೆ. ಮಧ್ಯಾಹ್ನ 3ರಿಂದ ತಾಲೀಮು ಪ್ರದರ್ಶನ ಮತ್ತು ಸಾಂಸ್ಕೃತಿಕ ವೈವಿದ್ಯ ನಡೆದು ಬಳಿಕ ರಾತ್ರಿ 7ರಿಂದ ಶ್ರೀ ದತ್ತಾಂಜನೇಯ ದೇವರ ವೈಭವೋಪೇತ ರಥೋತ್ಸವ ನಡೆಯಲಿದೆ.