Published
2 months agoon
By
Akkare Newsಪುತ್ತೂರು: ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘದ ಮಾರ್ಗದರ್ಶನದಲ್ಲಿ ಯುವ ಒಕ್ಕಲಿಗ ಗೌಡ ಸೇವಾ ಸಂಘದ ಆಶ್ರಯದಲ್ಲಿ ಮುಂಡೂರು ವಲಯ ಯುವ ಒಕ್ಕಲಿಗ ಗೌಡ ಸೇವಾ ಸಂಘದ ಆತಿಥ್ಯದಲ್ಲಿ ಒಕ್ಕಲಿಗ ಗೌಡ ಮಹಿಳಾ ಸಂಘ, ಒಕ್ಕಲಿಗ ಗೌಡ ಸ್ವಸಹಾಯ ಟ್ರಸ್ಟ್ ಸಹಯೋಗದೊಂದಿಗೆ ಪುತ್ತೂರು ತಾಲೂಕು ಮಟ್ಟದ ಯುವ ಕ್ರೀಡಾ ಸಂಭ್ರಮ-2025 ಫೆ.2 ಭಾನುವಾರ ನರಿಮೊಗರು ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆ ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಪುತ್ತೂರು ಯುವ ಒಕ್ಕಲಿಗ ಗೌಡ ಸಂಘದ ಅಧ್ಯಕ್ಷ ಅಮರನಾಥ ಗೌಡ ಬಪ್ಪಳಿಗೆ ತಿಳಿಸಿದ್ದಾರೆ.
ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಯುವ ಕ್ರೀಡಾ ಸಂಭ್ರಮದ ಅಂಗವಾಗಿ ಈಗಾಗಲೇ ಗ್ರಾಮ ಹಾಗೂ ವಲಯ ಮಟ್ಟದಲ್ಲಿ ಕ್ರೀಡಾಕೂಟಗಳು ಯಶಸ್ವಿಯಾಗಿ ನಡೆಸಲಾಗಿದೆ. ತಾಲೂಕು ಮಟ್ಟದ ಕ್ರೀಡಾ ಸಂಭ್ರಮದಲ್ಲಿ ತಾಲೂಕಿನ ಆರು ವಲಯಗಳ ಸುಮಾರು 600 ಮಂದಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.
ಕ್ರೀಡಾ ಸಂಭ್ರಮದ ಅಂಗವಾಗಿ ಬೆಳಿಗ್ಗೆ 7.30 ಕ್ಕೆ ಮುಕ್ವೆ ಮಜಲುಮಾರು ಶ್ರೀ ಉಮಾಮಹೇಶ್ವರ ದೇವಸ್ಥಾನದಿಂದ ಕ್ರೀಡಾಜ್ಯೋತಿ ವಿದ್ಯಾಸಂಸ್ಥೆ ತನಕ ಹೋಗಲಿದ್ದು, ಬಳಿಕ ವಿದ್ಯಾಸಂಸ್ಥೆಯ ಸಂಚಾಲಕ ಭಾಸ್ಕರ ಆಚಾರ್ ಹಿಂದಾರು ಕ್ರೀಡಾಂಗಣ ಉದ್ಘಾಟಿಸುವರು. ಬಳಿಕ 11.30 ಕ್ಕೆ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಶ್ರೀ ಆದಿಚುಂಚನಗಿರಿ ಮಂಗಳೂರು ಶಾಖಾ ಮಠದ ಡಾ.ಶ್ರೀ ಧರ್ಮಪಾಲನಾಥ ಸ್ವಾಮೀಜಿಯವರು ಆಶೀರ್ವಚನ ನೀಡಲಿದ್ದು, ಮುಖ್ಯ ಅತಿಥಿಗಳಾಗಿ ಮಾಜಿ ಶಾಸಕ ಸಂಜೀವ ಮಠಂದೂರು, ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘದ ಅಧ್ಯಕ್ಷ ರವಿ ಮುಂಗ್ಲಿಮನೆ, ಯುವಕ ಒಕ್ಕಲಿಗ ಗೌಡ ಸಂಘದ ಅಧ್ಯಕ್ಷ ಅಮರನಾಥ ಗೌಡ ಬಪ್ಪಳಿಗೆ, ಬೆಂಗಳೂರಿನ ಉದ್ಯಮಿ ನಳಿನಿ ಲೋಕಪ್ಪ ಗೌಡ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.
7-2-2025 ರಂದು ಶ್ರೀ ಒಡಿಯೂರು ರಥೋತ್ಸವ – ತುಳುನಾಡ ಜಾತ್ರೆ ನಡೆಯಲಿದ್ದು, ಬೆಳಗ್ಗೆ 9ಕ್ಕೆ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ನಡೆದು ಬಳಿಕ 10:30ಕ್ಕೆ ಮಹಾಮಂಗಳಾರತಿ ಬಳಿಕ 11:00ರಿಂದ ಧರ್ಮಸಭೆ ನಡೆಯಲಿದೆ. ಶ್ರೀ ಗುರುದೇವಾನಂದ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ. ಸಾಧ್ವಿ ಮಾತಾನಂದಮಯೀ ದಿವ್ಯ ಸಾನ್ನಿಧ್ಯ ವಹಿಸಲಿರುವರು. ಕಾರ್ಯಕ್ರಮದಲ್ಲಿ ಮಂಗಳೂರು ವಿಮಾನ ನಿಲ್ದಾಣದ ಸೀನಿಯರ್ ಕಮಾಂಡೆಂಟ್ ವೀರೇಂದ್ರ ಮೋಹನ್ ಜೋಶಿ, ಆಕಾಶವಾಣಿ ಸಹಾಯಕ ನಿರ್ದೇಶಕ ಪಿ.ಎಸ್.ಸೂರ್ಯನಾರಾಯಣ ಭಟ್, ಡಾ.ಅವಿನ್ ಆಳ್ವ, ರಾಮಪ್ರಸಾದ್, ಯಕ್ಷದ್ರುವ ಪಟ್ಲ ಫೌಂಡೇಷನ್ ಸ್ಥಾಪಕಾಧ್ಯಕ್ಷ ಸತೀಶ್ ಶೆಟ್ಟಿ ಪಟ್ಲ, ಬಾಲಕೃಷ್ಣ ಎಂ. ರೈ, ಪುಣೆ ಗುರುದೇವ ಸೇವಾ ಬಳಗ ಅಧ್ಯಕ್ಷ ಪ್ರಭಾಕರ ಶೆಟ್ಟಿ, ಜಿತೇಂದ್ರ ಎಸ್. ಕೊಟ್ಟಾರಿ, ಶ್ವೇತಾ ಸಿ. ರೈ, ಜಯಲಕ್ಷ್ಮೀ ಪಿ. ಶೆಟ್ಟಿ ಭಾಗವಹಿಸಲಿದ್ದಾರೆ. ಮಧ್ಯಾಹ್ನ 3ರಿಂದ ತಾಲೀಮು ಪ್ರದರ್ಶನ ಮತ್ತು ಸಾಂಸ್ಕೃತಿಕ ವೈವಿದ್ಯ ನಡೆದು ಬಳಿಕ ರಾತ್ರಿ 7ರಿಂದ ಶ್ರೀ ದತ್ತಾಂಜನೇಯ ದೇವರ ವೈಭವೋಪೇತ ರಥೋತ್ಸವ ನಡೆಯಲಿದೆ.