Published
2 months agoon
By
Akkare News
ಇಂಗ್ಲೆಂಡ್ ವಿರುದ್ಧದ ನಾಲ್ಕನೇ ಟಿ20 ಪಂದ್ಯದಲ್ಲಿ ಭಾರತ ತಂಡ 15 ರನ್‌ಗಳ ರೋಚಕ ಜಯ ಸಾಧಿಸಿದೆ. ಪಂದ್ಯದ ಚೇಸಿಂಗ್ ವೇಳೆಗೆ ಶಿವಂ ದುಬೆಗೆ ಬದಲಿ ಆಟಗಾರನಾಗಿ ಬೌಲಿಂಗ್ ಮಾಡಿದ ಹರ್ಷಿತ್ ರಾಣಾ, ನಿರ್ಣಾಯಕ 3 ವಿಕೆಟ್ ಪಡೆದು ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು. ಗೆಲುವಿನೊಂದಿಗೆ ಭಾರತ ತಂಡವು ಇನ್ನೂ ಒಂದು ಪಂದ್ಯ ಬಾಕಿ ಉಳಿದಿರುವಂತೆಯೇ ಸರಣಿಯನ್ನು 3-1 ಅಂತರದಿಂದ ವಶಪಡಿಸಿಕೊಂಡಿದೆ. ಸುದೀರ್ಘ ಅಂತರದ ಬಳಿಕ ತಂಡಕ್ಕೆ ಮರಳಿದ ಸ್ಫೋಟಕ ಬ್ಯಾಟರ್ ಶಿವಂ ದುಬೆ, ಅರ್ಧಶತಕ ಸಿಡಿಸಿ ಪಂದ್ಯಶ್ರೇಷ್ಠರಾದರು.
ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಇಂಗ್ಲೆಂಡ್ 9 ವಿಕೆಟ್ ಕಳೆದುಕೊಂಡು 181 ರನ್ ಗಳಿಸಿತು. ಇದಕ್ಕೆ ಪ್ರತಿಯಾಗಿ ಚೇಸಿಂಗ್ ನಡೆಸಿದ ಇಂಗ್ಲೆಂಡ್, 19.4 ಓವರ್‌ಗಳಲ್ಲಿ 166 ರನ್ ಗಳಿಸಿ ಆಲೌಟ್ ಆಯ್ತು.
ಮೊದಲು ಬ್ಯಾಟಿಂಗ್ ನಡೆಸಿದ ಭಾರತವು ಆರಂಭದಲ್ಲೇ ಮೇಲಿಂದ ಮೇಲೆ ವಿಕೆಟ್ ಕಳೆದುಕೊಂಡು ಸಂಕಷ್ಟ ಅನುಭವಿಸಿತು. ಭಾರತದ ಇನ್ನಿಂಗ್ಸ್‌ನ ಎರಡನೇ ಓವರ್ ಎಸೆದ ವೇಗಿ ಸಾಕಿಬ್ ಮಹಮೂದ್, ಒಂದೇ ಓವರ್‌ನಲ್ಲಿ ಭಾರತದ ಪ್ರಮುಖ 3 ವಿಕೆಟ್ ಕಬಳಿಸಿದರು. ಹೀಗಾಗಿ ಭಾರತ 3 ವಿಕೆಟ್ ನಷ್ಟಕ್ಕೆ 12 ರನ್‌ಗೆ ಕುಸಿಯಿತು. ಈ ವೇಳೆ ಅಬ್ಬರಿಸಿದ ಹಾರ್ದಿಕ್ ಪಾಂಡ್ಯ (53) ಮತ್ತು ಶಿವಂ ದುಬೆ (53) ತಲಾ ಅರ್ಧಶತಕ ಸಿಡಿಸಿದರು. ರಿಂಕು ಸಿಂಗ್ 30 ರನ್ ಗಳಿಸಿ ತಂಡದ ಮೊತ್ತಕ್ಕೆ ಕೊಡುಗೆ ನೀಡಿದರು. ಹೀಗಾಗಿ ಭಾರತವು ಸ್ಪರ್ಧಾತ್ಮಕ ಮೊತ್ತ ಗಳಿಸಲು ಸಾಧ್ಯವಾಯ್ತು.