Published
2 months agoon
By
Akkare Newsಬಂಟ್ವಾಳ: ಫೆ.೫ ರಂದು ಬಿಸಿರೋಡಿನ ಬ್ರಹ್ಮ ಶ್ರೀ ನಾರಾಯಣ ಗುರು ಸಭಾ ಭವನ ಗಾಣದಪಡ್ಪು ಇಲ್ಲಿ ಜಿಲ್ಲಾ ಮಟ್ಟದ ಜನತಾದರ್ಶನ ಕಾರ್ಯಕ್ರಮ ನಡೆಯಲಿದೆ ಎಂದು ತಹಶಿಲ್ದಾರ್ ಕಚೇರಿಯ ಪ್ರಕಟನೆ ತಿಳಿಸಿದೆ.
ಸಾರ್ವಜನಿಕ ಕುಂದುಕೊರತೆಗಳಿಗೆ ಆದಷ್ಟು ಶೀಘ್ರವಾಗಿ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಫೆ.5 ರಂದು ಬಿಸಿರೋಡಿನ ಬ್ರಹ್ಮ ಶ್ರೀ ನಾರಾಯಣ ಗುರು ಸಭಾ ಭವನದಲ್ಲಿ ಬೆಳಿಗ್ಗೆ 10 ಗಂಟೆಗೆ ಆರೋಗ್ಯ ಕುಟುಂಬ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಇವರ ನೇತೃತ್ವದಲ್ಲಿ ಜಿಲ್ಲಾಧಿಕಾರಿಯವರು ಇತರ ಜಿಲ್ಲಾ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ತಾಲೂಕು ಮಟ್ಟದ ಜನತಾದರ್ಶನ ಕಾರ್ಯಕ್ರಮ ಆಯೋಜಿಸಲಾಗಿದೆ.