Published
2 months agoon
By
Akkare Newsಬೆಂಗಳೂರು : ಈ ಸಂಬಂಧ ರಾಜ್ಯ ಸರ್ಕಾರದಿಂದ ಆದೇಶ ಮಾಡಲಾಗಿದ್ದು, ಮಾಹಿತಿ ಹಕ್ಕು ಕಾಯ್ದೆ, 2005 (2005 ರ ಕೇಂದ್ರ ಕಾಯ್ದೆ 22) ರ ಸೆಕ್ಷನ್ 15 ರ ಉಪ-ವಿಭಾಗ (3) ರ ಮೂಲಕ ನನಗೆ ನೀಡಲಾದ ಅಧಿಕಾರವನ್ನು ಚಲಾಯಿಸಿ, ಕರ್ನಾಟಕದ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಈ ಕೆಳಗಿನ ವ್ಯಕ್ತಿಗಳನ್ನು ಕರ್ನಾಟಕ ಮಾಹಿತಿ ಆಯೋಗದಲ್ಲಿ ರಾಜ್ಯ ಮುಖ್ಯ ಮಾಹಿತಿ ಆಯುಕ್ತರು ಮತ್ತು ರಾಜ್ಯ ಮಾಹಿತಿ ಆಯುಕ್ತರನ್ನಾಗಿ ನೇಮಿಸಲಾಗಿದೆ ಎಂದಿದೆ.ಕರ್ನಾಟಕ ಮಾಹಿತಿ ಆಯೋಗದ ರಾಜ್ಯ ಮಾಹಿತಿ ಆಯುಕ್ತರಾಗಿ ಹಿರಿಯ ಪತ್ರಕರ್ತ ಬದ್ರುದ್ದೀನ್ .ಕೆ ಮಾಣಿ ಸಹಿತ 8 ಮಂದಿ ನೇಮಕ ಮಾಡಿ ರಾಜ್ಯಪಾಲರ ಆದೇಶ ಹೊರಡಿಸಿದೆ.
ನಿವೃತ್ತ ಪೊಲೀಸ್ ಮಹಾನಿರ್ದೇಶಕ ಅಶಿತ್ ಮೋಹನ್ ಪ್ರಸಾದ್ ಆಯೋಗದ ಮುಖ್ಯ ಮಾಹಿತಿ ಆಯುಕ್ತರಾಗಿ ನೇಮಕಗೊಂಡಿದ್ದಾರೆ.
ಬದ್ರುದ್ದೀನ್ ಅವರು ಕಳೆದ ೩ ದಶಕಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಜನಮನ್ನಣೆಯನ್ನು ಗಳಿಸಿದ್ದರು. ೨೦೧೪ರಿಂದ ಪಬ್ಲಿಕ್ ಟಿವಿಯಲ್ಲಿ ರಾಜಕೀಯ ವಿಭಾಗದಲ್ಲಿ ಹಿರಿಯ ವರದಿಗಾರರಾಗಿ ಸೇವೆ ಸಲ್ಲಿಸಿದ್ದಾರೆ.
ಕರ್ನಾಟಕ ಮಾಧ್ಯಮ ಅಕಾಡೆಮಿ ಸದಸ್ಯರಾಗಿ ಸೇವೆ ಸಲ್ಲಿಸಿರುವ ಇವರು ಮಾಧ್ಯಮ ಕ್ಷೇತ್ರದ ಗಣನೀಯ ಸಾಧನೆಗೆ ಬೆಂಗಳೂರು ಪ್ರೆಸ್ ಕ್ಲಬ್ ಪ್ರಶಸ್ತಿ, ಮಾಧ್ಯಮ ಅಕಾಡೆಮಿ ಪ್ರಶಸ್ತಿ ಸಹಿತ ಅನೇಕ ಪ್ರಶಸ್ತಿಗಳಿಗೆ ಭಜಕಾರಗಿದ್ದಾರೆ.
ರಾಜ್ಯ ಮುಖ್ಯ ಮಾಹಿತಿ ಆಯುಕ್ತರು ಮತ್ತು ರಾಜ್ಯ ಮಾಹಿತಿ ಆಯುಕ್ತರ ಕಚೇರಿಯ ನಿಯಮಗಳು ಮತ್ತು ಷರತ್ತುಗಳು ಮಾಹಿತಿ ಹಕ್ಕು ಕಾಯ್ದೆ 2005 ರ ಸೆಕ್ಷನ್ 16 ರ ಪ್ರಕಾರ ಮಾಹಿತಿ ಹಕ್ಕು (ಮುಖ್ಯ ಮಾಹಿತಿ ಆಯುಕ್ತರು, ಕೇಂದ್ರ ಮಾಹಿತಿ ಆಯೋಗದಲ್ಲಿನ ಮಾಹಿತಿ ಆಯುಕ್ತರ ಅಧಿಕಾರಾವಧಿ, ವೇತನ, ಭತ್ಯೆಗಳು ಮತ್ತು ಇತರ ಸೇವಾ ನಿಯಮಗಳು ಮತ್ತು ಷರತ್ತುಗಳು) ಜೊತೆಗೆ ಇರಬೇಕು. ರಾಜ್ಯ ಮುಖ್ಯ ಮಾಹಿತಿ ಆಯುಕ್ತರು ಮತ್ತು ರಾಜ್ಯ ಮಾಹಿತಿ ಆಯೋಗದಲ್ಲಿ ರಾಜ್ಯ ಮಾಹಿತಿ ಆಯುಕ್ತರು) ನಿಯಮಗಳು, 2019ರಂತೆ ಇರಲಿದೆ ಎಂಬುದಾಗಿ ತಿಳಿಸಿದೆ.