Published
2 months agoon
By
Akkare Newsಪುತ್ತೂರು : ಶಿಬಿರಾರ್ಥಿಗಳು ಎನ್ಎಸ್ಎಸ್ ನ ಉದ್ದೇಶವನ್ನರಿತು ಶಿಬಿರದಲ್ಲಿ ತೊಡಗಿಸಿಕೊಳ್ಳಬೇಕು. ಆ ಮೂಲಕ ವ್ಯಕ್ತಿತ್ವದ ಸರ್ವತೋಮುಖ ಅಭಿವೃದ್ಧಿಯನ್ನು ಕಂಡುಕೊಳ್ಳಬೇಕು ಎಂದು ಸಂತ ಫಿಲೋಮಿನ ಕಾಲೇಜಿನ ಉಪ ಪ್ರಾಂಶುಪಾಲರಾದ ಡಾ. ವಿಜಯಕುಮಾರ್ ಮೊಳೆಯಾರ್ ಹೇಳಿದರು. ಇವರು ಕೋಡಿಂಬಾಡಿ ಶಾಲೆಯಲ್ಲಿ ಜರಗುತ್ತಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಉಪ್ಪಿನಂಗಡಿಯ ಎನ್ ಎಸ್ ಎಸ್ ಶಿಬಿರದ ಮೂರನೇ ದಿನದ ಸಾರ್ವಜನಿಕ ಸಭಾ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ “ಸೇವಾ ಮನೋಭಾವ-ಹೊಸ ದೃಷ್ಟಿಕೋನ” ಎಂಬ ವಿಷಯದ ಬಗ್ಗೆ ವಿಶೇಷ ಉಪನ್ಯಾಸ ನೀಡುತ್ತಾ ಮಾತನಾಡಿದರು.
ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಉಪ್ಪಿನಂಗಡಿಯ ಕಾಲೇಜು ಅಭಿವೃದ್ಧಿ ಸಮಿತಿಯ ಸದಸ್ಯರಾಗಿರುವ ಶ್ರೀಮತಿ ಶಾಂಭವಿ ರೈ ವಹಿಸಿದ್ದರು. ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ರವಿರಾಜ ಎಸ್, ಉಪನ್ಯಾಸಕರುಗಳಾದ ಸಂಧ್ಯಾ ಎಸ್, ಜಾಯ್ಸ್ ಲೋಬೊ ಉಪಸ್ಥಿತರಿದ್ದರು. ಶಿಬಿರಾರ್ಥಿಗಳಾದ ಅಂಜಲಿ ಸ್ವಾಗತಿಸಿದರು, ಕಾರ್ತಿಕ್ ವಂದಿಸಿದರು ಮತ್ತು ಲಾವಣ್ಯ ಕಾರ್ಯಕ್ರಮ ನಿರೂಪಿಸಿದರು.