Published
2 months agoon
By
Akkare Newsಸುಳ್ಯ:ಪಾದಾಚಾರಿ ವ್ಯಕ್ತಿಗಳಿಬ್ಬರಿಗೆ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಮೃತಪಟ್ಟ ಬಗ್ಗೆ ವರದಿಯಾಗಿದೆ.
ಸುಳ್ಯ ತಾಲೂಕಿನ ಕನಕಮಜಲು ಗ್ರಾಮದ ಸುಣ್ಣಮೂಲೆಯಲ್ಲಿ ಸಂಭವಿಸಿದೆ.
ಕನಕಮಜಲು ಕೋಡಿಯ ರಾಮಯ್ಯ ಶೆಟ್ಟಿ (67 ವ) ಹಾಗೂ ಜನಾರ್ದನ ಶೆಟ್ಟಿ (50 ವ) ಅವರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಮೃತಪಟ್ಟವರು.
ಕನಕಮಜಲು ಶ್ರೀ ಆತ್ಮಾರಾಮ ಭಜನಾ ಮಂದಿರದ ಏಕಾಹ ಭಜನೆ ನಡೆಯುತ್ತಿದ್ದು ಕೋಡಿಯ ಜನಾರ್ದನ ಶೆಟ್ಟಿ ಹಾಗೂ ಅವರ ಮಾವ ರಾಮ ಶೆಟ್ಟಿ ಅವರು ಏಕಾಹ ಭಜನೆಗೆ ಮುಖ್ಯರಸ್ತೆ ಬದಿಯಲ್ಲಿ ನಡೆದುಕೊಂಡು ಬರುತ್ತಿದ್ದ ವೇಳೆ ಪುತ್ತೂರಿನಿಂದ ಸುಳ್ಯ ಕಡೆಗೆ ತೆರಳುತ್ತಿದ್ದ ಕಾರೊಂದು ರಭಸವಾಗಿ ಬಂದು ಇವರಿಬ್ಬರಿಗೆ ಢಿಕ್ಕಿ ಹೊಡೆದಿದೆ.
ಈ ವೇಳೆ ರಾಮ ಶೆಟ್ಟಿ ಅವರು ರಸ್ತೆ ಬದಿ ಬಿದ್ದಿರುವುದನ್ನು ಗಮನಿಸಿದ ಸ್ಥಳೀಯರು ಅವರನ್ನು ಅಂಬ್ಯುಲೆನ್ಸ್ ಮೂಲಕ ಸುಳ್ಯದ ಕೆವಿಜಿ ಆಸ್ಪತ್ರೆಗೆ ಕರೆತಂದು ದಾಖಲಿಸಿದ್ದರು. ಅಲ್ಲಿಂದ ಮಂಗಳೂರಿಗೆ ರವಾನಿಸಲಾಗಿದ್ದು ಅಲ್ಲಿ ಮೃತಪಟ್ಟರು ಎಂದು ತಿಳಿದು ಬಂದಿದೆ.
ಆದರೆ ಕಾರು ಜನಾರ್ದನ ಶೆಟ್ಟಿ ಅವರಿಗೂ ಢಿಕ್ಕಿ ಹೊಡೆದಿದ್ದು, ಅವರು ರಸ್ತೆಯಿಂದ ಸ್ವಲ್ಪ ದೂರ ಎಸೆಯಲ್ಪಟ್ಟು ಗಂಭೀರವಾಗಿ ಗಾಯಗೊಂಡು ಪ್ರಜ್ಞಾಹೀನರಾಗಿ ಬಿದ್ದಿದ್ದರು ಎನ್ನಲಾಗಿದೆ.
ರಕ್ತದ ಮಡುವಿನಲ್ಲಿ ಬಿದ್ದಿದ್ದ ಅವರನ್ನು ಗಮನಿಸಿ, ಸ್ಥಳೀಯರಾದ ಜಯಪ್ರಸಾದ್ ಕಾರಿಂಜ ಅವರ ಕಾರಿನಲ್ಲಿ ಸುಳ್ಯದ ಕೆವಿಜಿ ಆಸ್ಪತ್ರೆಗೆ ಕರೆ ತಂದು ಪ್ರಥಮ ಚಿಕಿತ್ಸೆ ಕೊಡಿಸಿ,
ಮಂಗಳೂರಿನ ಆಸ್ಪತ್ರೆಗೆ ಅಂಬ್ಯುಲೆನ್ಸ್ ಮೂಲಕ ರವಾನಿಸಲಾಗಿತ್ತು.ಅಲ್ಲಿ ಮೃತಪಟ್ಟರು ಎಂದು ತಿಳಿದು ಬಂದಿದೆ.
ಕಾರು ಚಾಲಕ ಇಬ್ಬರಿಗೆ ಢಿಕ್ಕಿ ಹೊಡೆದು ನಿಲ್ಲಿಸದೇ, ಪರಾರಿಯಾಗಿರುವುದಾಗಿ ತಿಳಿದುಬಂದಿದೆ.