Published
2 months agoon
By
Akkare Newsಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಭಾನುವಾರ ಮಹಾ ಕುಂಭಮೇಳದಲ್ಲಿ ಕುಟುಂಬ ಸಮೇತ ಪಾಲ್ಗೊಂಡು ಪುಣ್ಯ ಸ್ನಾನ ಮಾಡಿದ್ದಾರೆ.
ಮಹಾ ಕುಂಭ ಮೇಳದಲ್ಲಿ ಪಾಲ್ಗೊಂಡಿರುವ ಬಗ್ಗೆ ಡಿಕೆ ಶಿವಕುಮಾರ್ ಅವರೇ ತಮ್ಮ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಪುಣ್ಯ ಸ್ನಾನದ ಫೋಟೊಗಳನ್ನು ಹಂಚಿಕೊಂಡಿದ್ದಾರೆ. “ಉತ್ತರ ಪ್ರದೇಶದ ಪ್ರಯಾಗ್ ರಾಜ್‌ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಕುಟುಂಬ ಸಮೇತ ಪಾಲ್ಗೊಂಡು, ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನ ಮಾಡಿದೆ. 144 ವರ್ಷಗಳಿಗೊಮ್ಮೆ ನಡೆಯುವ ಮಹಾ ಕುಂಭದಲ್ಲಿ ಪಾಲ್ಗೊಳ್ಳಲು ಅವಕಾಶ ಸಿಕ್ಕಿದ್ದು ನಿಜಕ್ಕೂ ಖುಷಿ ತಂದಿದೆ.” ಎಂದು ತಮ್ಮ ಸಂತಸ ವ್ಯಕ್ತಪಡಿಸಿದ್ದಾರೆ.