Published
2 months agoon
By
Akkare Newsಈಶಾನ್ಯ ರಾಜ್ಯದಲ್ಲಿ ಜನಾಂಗೀಯ ಹಿಂಸಾಚಾರ ಭುಗಿಲೆದ್ದ ಸುಮಾರು ಎರಡು ವರ್ಷಗಳ ನಂತರ ಮಣಿಪುರ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಭಾನುವಾರ ತಮ್ಮ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಮಣಿಪುರ ಮುಖ್ಯಮಂತ್ರಿ ಎನ್.ಬಿರೇನ್ ಸಿಂಗ್ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಪತ್ರವನ್ನು ರಾಜ್ಯಪಾಲ ಅಜಯ್ ಕುಮಾರ್ ಭಲ್ಲಾ ಅವರಿಗೆ ಇಂಫಾಲ್ ನ ರಾಜಭವನದಲ್ಲಿ ಹಸ್ತಾಂತರಿಸಿದರು.
ಮಣಿಪುರ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಶನಿವಾರ ಸಂಜೆ ಚಾರ್ಟರ್ಡ್ ವಿಮಾನದಲ್ಲಿ ದೆಹಲಿಗೆ ತೆರಳಿದ್ದರು. ರಾಷ್ಟ್ರ ರಾಜಧಾನಿಗೆ ಅವರ ಭೇಟಿಯ ಉದ್ದೇಶ ತಿಳಿದಿಲ್ಲ ಎಂದು ಅವರು ಹೇಳಿದ್ದರು.