Published
2 months agoon
By
Akkare Newsಬೆಂಗಳೂರು: ಈ ವರ್ಷ ಚಳಿಗಾಲ ಪೂರ್ಣಗೊಳ್ಳುವ ಮುನ್ನವೇ ಬೇಸಿಗೆ ಕಾಲಿಟ್ಟಂತೆ ಕಾಣುತ್ತಿದೆ. ಕಳೆದ 2 ವಾರದಲ್ಲಿ ರಾಜ್ಯದಲ್ಲಿ ಚಳಿಯ ಪ್ರಮಾಣ ಭಾರೀ ಕಡಿಮೆ ಆಗಿದೆ.
ಚಳಿಗಾಲ ಮುಗಿಯಲು ಇನ್ನೂ ಒಂದು ತಿಂಗಳು ಟೈಮ್ ಇದೆ. ಇದರ ಮಧ್ಯೆ ಹವಾಮಾನ ವೈಪರೀತ್ಯ ಕಂಡು ಬಂದಿದೆ. ಹಾಗಾಗಿ ಚಳಿಯ ನಡುವೆ ಬಿಸಿಲಿನ ತಾಪ ಕೂಡ ಹೆಚ್ಚಾಗಿದೆ. ಬಿಸಿಲಿನ ತಾಪದ ಜತೆಗೆ ಭಾರೀ ಮಳೆ ಬೀಳುವ ಮುನ್ಸೂಚನೆಯನ್ನು ರಾಜ್ಯ ಹವಾಮಾನ ಇಲಾಖೆ ನೀಡಿದೆ.
ಎಲ್ಲೆಲ್ಲಿ ಮಳೆ?
ನಾಳೆ ಮೈಸೂರು, ಕೊಡಗು, ಹಾಸನ, ಚಿಕ್ಕಮಗಳೂರು, ಚಾಮರಾಜನಗರ, ದಕ್ಷಿಣ ಕನ್ನಡ ಮತ್ತು ಉಡುಪಿ ಸೇರಿದಂತೆ ಕರ್ನಾಟಕದ ಏಳು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.
ಉತ್ತರ ಕನ್ನಡ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಬೆಂಗಳೂರು ನಗರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ಶಿವಮೊಗ್ಗ ಮತ್ತು ವಿಜಯನಗರ ಸೇರಿದಂತೆ ಹಲವೆಡೆ ಶೀತಗಾಳಿ ಇರಲಿದೆ.