Published
2 months agoon
By
Akkare News
ಆತ್ಮಹತ್ಯೆ ಮಾಡಿಕೊಂಡವರನ್ನು ಕುಶಾಲ್( 15) ಚೇತನ್( 45), ರೂಪಾಲಿ (43), ಪ್ರಿಯಂವದ(65) ಎಂದು ಗುರುತಿಸಲಾಗಿದೆ.
ಮೊದಲು ಚೇತನ್ ತನ್ನ ತಾಯಿ, ಪತ್ನಿ ಹಾಗೂ ಮಗನಿಗೆ ವಿಷ ಉಣಿಸಿ ಕೊಲೆ ಮಾಡಿದ ನಂತರ ತಾನು ನೇಣು ಬಿಗಿದು ಅತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ.
ಡೆತ್ ನೋಟ್ ಪತ್ತೆ :
ಹಣಕಾಸಿನ ಸಮಸ್ಯೆಯಿಂದಾಗಿ ನಾವು ಸಾಯುತ್ತಿದ್ದೇವೆ. ನಮ್ಮ ಸಾವಿಗೆ ಬೇರೆ ಯಾರೂ ಕಾರಣರಲ್ಲ ನನ್ನ ಸ್ನೇಹಿತರು, ಸಂಬಂಧಿಕರಿಗೆ ಯಾರೂ ತೊಂದರೆ ಕೊಡಬೇಡಿ. ನಮ್ಮನ್ನು ಕ್ಷಮಿಸಿ ಐ ಆಮ್ ಸ್ವಾರಿ ಎಂದು ಡೆತ್ ನೋಟ್ ನಲ್ಲಿ ಉಲ್ಲೇಖಿಸಲಾಗಿದೆ ಎನ್ನಲಾಗಿದೆ .
ವಿದ್ಯಾರಣ್ಯಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು. ಇನ್ಸ್ ಪೆಕ್ಟರ್ ಮೋಹಿತ್, ಡಿಸಿಪಿ ಜಾಹ್ನನಿ, ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಭೇಟಿ ಪರಿಶೀಲನೆ ನಡೆಸಿ ನಾಲ್ವರ ಸಾವಿನ ಕುರಿತು ತನಿಖೆ ಆರಂಭಿಸಿದ್ದಾರೆ.