Published
2 months agoon
By
Akkare Newsಕಡಬ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಸಕ್ರಿಯ ಕಾರ್ಯಕರ್ತ ಪಿ.ಕೆ ಅಭಿಲಾಷ್ ಅವರನ್ನು ನೇಮಕಗೊಳಿಸಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಆದೇಶಿಸಿದ್ದಾರೆ.
ನೂಜಿಬಾಳ್ತಿಲ ಕಾಂಗ್ರೆಸ್ ಬೂತ್ ಸಮಿತಿ ಅಧ್ಯಕ್ಷರಾಗಿ, ನೂಜಿಬಾಳ್ತಿಲ ಗ್ರಾಮ ಸಮಿತಿ ಅಧ್ಯಕ್ಷರಾಗಿ, ಉಸ್ತುವಾರಿಯಾಗಿ, ಕಡಬ ಬ್ಲಾಕ್ ಯುವ ಕಾಂಗ್ರೆಸ್ ಚುನಾಯಿತ ಅಧ್ಯಕ್ಷರಾಗಿ ಕಾಂಗ್ರೆಸ್ ಪಕ್ಷದಲ್ಲಿ ವಿವಿಧ ಹುದ್ದೆಗಳನ್ನು ನಿಭಾಯಿಸಿದ್ದರು.
ವಿವಿಧ ಚುಣಾವಣೆ ಸಂದರ್ಭಗಳಲ್ಲಿ ಬಿಳಿನೆಲೆ ಗ್ರಾಮದ ಉಸ್ತುವಾರಿಯಾಗಿ ಕಾರ್ಯ ನಿರ್ವಹಿಸಿರುವ ಪಿ.ಕೆ ಅಭಿಲಾಷ್ ಅವರು ಸಾಮಾಜಿಕ, ಶೈಕ್ಷಣಿಕ, ಧಾರ್ಮಿಕ ಕ್ಷೇತ್ರಗಳಲ್ಲಿ ಹಾಗೂ ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದಾರೆ.