Published
2 months agoon
By
Akkare Newsಮಹಾರಾಷ್ಟ್ರದ ಲಾತೂರ್ ನಲ್ಲಿ ಹಕ್ಕಿ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಬೀದರ್ ಜಿಲ್ಲೆಯಲ್ಲಿ ಹೈಅಲರ್ಟ್ ಕೈಗೊಳ್ಳಲಾಗಿದೆ.
ಮಹಾರಾಷ್ಟ್ರದಿಂದ ಕೋಳಿ ಮಾಂಸ, ಕೋಳಿ ಮೊಟ್ಟೆ ಸಾಗಾಣಿ ನಿಷೇಧಿಸಲಾಗಿದೆ. ಬೀದರ್ ಜಿಲ್ಲೆಯ ಬಾಲ್ಕಿ, ಕಮಲನಗರ, ಬಸವಕಲ್ಯಾಣ, ಔರಾದ್ ತಾಲೂಕು ಸೇರಿ ಹಲವಡೆ ಕಟ್ಟೆಚ್ಚರ ವಹಿಸಲಾಗಿದೆ.
ತಾಲೂಕು ಗಡಿಗಳಲ್ಲಿ ಪಶು ಸಂಗೋಪನೆ ಇಲಾಖೆ ಸಿಬ್ಬಂದಿ ಚೆಕ್ ಪೋಸ್ಟ್ ಸ್ಥಾಪಿಸಿ ತಪಾಸಣೆ ಕೈಗೊಂಡಿದ್ದಾರೆ.
ಮಹಾರಾಷ್ಟ್ರದಿಂದ ಬೀದರ್ ಜಿಲ್ಲೆಗೆ ಕೋಳಿ ಉತ್ಪನ್ನ ಸಾಗಾಣಿಕೆ ನಿರ್ಬಂಧ ಹೇರಲಾಗಿದೆ. ಮಹಾರಾಷ್ಟ್ರದಿಂದ ಕೋಳಿ ಮಾಂಸ, ಕೋಳಿ ಮೊಟ್ಟೆ ಸಾಗಾಣಿ ನಿಷೇಧಿಸಲಾಗಿದೆ ಎಂದು ಪಶು ಸಂಗೋಪನ ಇಲಾಖೆಯ ಉಪನಿರ್ದೇಶಕರು ಮಾಹಿತಿ ನೀಡಿದ್ದಾರೆ.