Published
2 months agoon
By
Akkare Newsನವದೆಹಲಿ: ಭಾರತೀಯ ಜನತಾ ಪಕ್ಷದ ಹಿರಿಯ ನಾಯಕಿ ಮತ್ತು ಶಾಲಿಮಾರ್ ಬಾಗ್ ಶಾಸಕಿ ರೇಖಾ ಗುಪ್ತಾ ಅವರನ್ನು ದಿಲ್ಲಿಯ ನೂತನ ಮುಖ್ಯಮಂತ್ರಿಯಾಗಿ ನೇಮಿಸಲಾಗಿದೆ ಎಂದು ಬುಧವಾರ ನಡೆದ ಶಾಸಕಾಂಗ ಪಕ್ಷದ ಸಭೆಯ ನಂತರ ಬಿಜೆಪಿ ಮೂಲಗಳು ದೃಢಪಡಿಸಿವೆ.
ಪರ್ವೇಶ್ ವರ್ಮಾ ಅವರು ಡಿಸಿಎಂ ಆಗಲಿದ್ದಾರೆ.ಶಾಲಿಮಾರ್ ಬಾಗ್ ಕ್ಷೇತ್ರದ ಶಾಸಕರಾಗಿರುವ 50 ವರ್ಷದ ಗುಪ್ತಾ ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮ ಪಕ್ಷದ ನಾಯಕಿ ಬಂದನಾ ಕುಮಾರಿ ಅವರನ್ನು ಸೋಲಿಸಿದ್ದರು.ವಿಧಾನಸಭಾ ಚುನಾವಣೆಯಲ್ಲಿ 70 ಸ್ಥಾನಗಳಲ್ಲಿ 44 ಸ್ಥಾನಗಳ ಸ್ಪಷ್ಟ ಬಹುಮತವನ್ನು ಗಳಿಸುವ ಮೂಲಕ 27 ವರ್ಷಗಳ ನಂತರ ಬಿಜೆಪಿ ದಿಲ್ಲಿಯಲ್ಲಿ ಅಧಿಕಾರಕ್ಕೆ ಮರಳಿದೆ. ನೂತನ ಮುಖ್ಯಮಂತ್ರಿಯ ಪ್ರಮಾಣವಚನ ಸಮಾರಂಭವು ಫೆಬ್ರವರಿ 20 ರಂದು ರಾಮಲೀಲಾ ಮೈದಾನದಲ್ಲಿ ನಡೆಯಲಿದೆ.