Published
2 months agoon
By
Akkare Newsಕೊಡಗು ಜಿಲ್ಲೆಯ ಹಲವು ಕಡೆಗಳಲ್ಲಿ ಬುಧವಾರ ಸಾಧಾರಣ ಮಳೆಯಾಗಿದೆ. ಮಡಿಕೇರಿ ತಾಲೂಕಿನ ನಾಪೋಕ್ಲು ಸಮೀಪದ ಯವಕಪಾಡಿ, ಕಕ್ಕಬೆ, ಕುಂಜಿಲ, ನಾಲಡಿ, ಚೆಯ್ಯಂಡಾಣೆ ಸೇರಿ ವಿವಿಧ ಕಡೆ ಮಳೆಯಾಗಿದೆ. ಫೆ.21 ರವರೆಗೆ ಜಿಲ್ಲೆಯಲ್ಲಿ ಸಾಧಾರಣಾ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿತ್ತು. ಕೊಡಗು ಜಿಲ್ಲೆಯಾದ್ಯಂತ ಕಾಫಿ ಕೊಯ್ಲು ಮುಕ್ತಾಯದ ಹಂತದಲ್ಲಿದ್ದು, ಈಗಾಗಲೇ ಕೆಲವರು ಕೊಯ್ಲು ಮುಗಿಸಿ ಕೃತಕವಾಗಿ ತೋಟಗಳಿಗೆ ನೀರು ಸಿಂಪಡಿಸುತ್ತಿದ್ದಾರೆ. ಈಗ ಮಳೆಯಾದರೆ ಕಾಫಿ ಹೂವು ಅರಳಲು ಅನುಕೂಲವಾಗುತ್ತದೆ. ಹಾಗಾಗಿ ಜಿಲ್ಲೆಯ ಕಾಫಿ ಬೆಳೆಗಾರರು ಮಳೆಗೆ ಎದುರು ನೋಡುತ್ತಿದ್ದಾರೆ.
ನೂಜಿಬಾಳ್ತಿಲ ಕಾಂಗ್ರೆಸ್ ಬೂತ್ ಸಮಿತಿ ಅಧ್ಯಕ್ಷರಾಗಿ, ನೂಜಿಬಾಳ್ತಿಲ ಗ್ರಾಮ ಸಮಿತಿ ಅಧ್ಯಕ್ಷರಾಗಿ, ಉಸ್ತುವಾರಿಯಾಗಿ, ಕಡಬ ಬ್ಲಾಕ್ ಯುವ ಕಾಂಗ್ರೆಸ್ ಚುನಾಯಿತ ಅಧ್ಯಕ್ಷರಾಗಿ ಕಾಂಗ್ರೆಸ್ ಪಕ್ಷದಲ್ಲಿ ವಿವಿಧ ಹುದ್ದೆಗಳನ್ನು ನಿಭಾಯಿಸಿದ್ದರು.
ವಿವಿಧ ಚುಣಾವಣೆ ಸಂದರ್ಭಗಳಲ್ಲಿ ಬಿಳಿನೆಲೆ ಗ್ರಾಮದ ಉಸ್ತುವಾರಿಯಾಗಿ ಕಾರ್ಯ ನಿರ್ವಹಿಸಿರುವ ಪಿ.ಕೆ ಅಭಿಲಾಷ್ ಅವರು ಸಾಮಾಜಿಕ, ಶೈಕ್ಷಣಿಕ, ಧಾರ್ಮಿಕ ಕ್ಷೇತ್ರಗಳಲ್ಲಿ ಹಾಗೂ ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದಾರೆ.