Published
1 month agoon
By
Akkare News
ಈ ಸಂದರ್ಭದಲ್ಲಿ ವಿವಿಧ ಪಕ್ಷಗಳ ಮುಖಂಡರು, ಧಾರ್ಮಿಕ ಸಾಮಾಜಿಕ ಮುಖಂಡರು, ವಿದ್ಯಾರ್ಥಿಗಳು, ಲಾರಿ ಚಾಲಕರು, ರಿಕ್ಷಾ ಚಾಲಕರು ಮತ್ತು ಸಾರ್ವಜನಿಕರು ಅತ್ಯುತ್ಸಾಹದಿಂದ ಪಾಲ್ಗೊಂಡು ಎಸ್ ಡಿ ಪಿ ಐ ನಡೆಸುವ ಹೋರಾಟಕ್ಕೆ ಬೆಂಬಲವನ್ನು ಸೂಚಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಎಸ್ ಡಿ ಪಿ ಐ ಪುತ್ತೂರು ವಿಧಾನಸಭಾ ಕ್ಷೇತ್ರ ಅಧ್ಯಕ್ಷರಾದ ಅಶ್ರಫ್ ಬಾವು ರವರು ಅಸಮರ್ಪಕ ಹಾಗೂ ಅವೈಜ್ಞಾನಿಕ ಬ್ರಹ್ಮರಕೊಟ್ಲು ಟೋಲ್ ಗೇಟ್ ತೆರವುಗೊಳಿಸುವಂತೆ ಆಗ್ರಹಿಸಿ ಈಗಾಗಲೇ ವಿವಿಧ ಸ್ತರದ ಹೋರಾಟಗಳ ರೂಪುರೇಷೆ ಪಕ್ಷದ ಜಿಲ್ಲಾ ಸಮಿತಿ ರೂಪಿಸಿದ್ದು, ಇದರ ಭಾಗವಾಗಿ ಜಿಲ್ಲಾದ್ಯಂತ ಸಾರ್ವಜನಿಕರ ಸಹಿ ಸಂಗ್ರಹ ಅಭಿಯಾನ ನಡೆಸಿದ್ದು, ಮುಂದಿನ ಭಾಗವಾಗಿ ಫೆಬ್ರವರಿ 25 ರಂದು ಟೋಲ್ ಗೇಟ್ ಬಳಿ ಒಂದು ದಿನದ ಧರಣಿ ಸತ್ಯಾಗ್ರಹ ಕೂಡ ನಡೆಸಲು ಜಿಲ್ಲಾ ಸಮಿತಿಯು ತೀರ್ಮಾನಿಸಿದ್ದು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕರೆ ನೀಡಿದರು.