Published
1 year agoon
By
Akkare News
ಬೆಂಗಳೂರಿನ ಅಶೋಕನಗರದ ಗರುಡ ಮಾಲ್ ಬಳಿ ಕಾಂಗ್ರೆಸ್ ಮುಖಂಡ ಹೈದರ್ ಅಲಿ ಬರ್ಬರ ಕೊಲೆ. ಶನಿವಾರ ರಾತ್ರಿ ಲೈವ್ ಬ್ಯಾಂಡ್ ಕಾರ್ಯಕ್ರಮ ಮುಗಿಸಿಕೊಂಡು ಬೈಕ್‌ನಲ್ಲಿ ತೆರಳುತ್ತಿದ್ದಾಗ ದುಷ್ಕರ್ಮಿಗಳು ಅವರನ್ನು ಹತ್ಯೆ ಮಾಡಿದ್ದಾರೆ. ಹೈದರ್ ಅಲಿ ಅವರ ಸ್ನೇಹಿತನಿಗೂ ಗಾಯಗಳಾಗಿದ್ದು, ಘಟನೆ ಸಂಬಂಧ ಅಶೋಕನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಆರೋಪಿಗಳ ಹುಡುಕಾಟ ನಡೆಸುತ್ತಿದ್ದಾರೆ.!