Published
1 month agoon
By
Akkare News
ಇವರು ಇತ್ತೀಚಿಗೆ ಉಪ್ಪಿನಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಆಂತರಿಕ ಗುಣಮಟ್ಟ ಮತ್ತು ಭರವಸಾ ಕೋಶ ಹಾಗೂ ರಾಷ್ಟ್ರೀಯ ಸೇವಾ ಯೋಜನಾ ಘಟಕಗಳು ಆಯೋಜಿಸಿದ ಸರಣಿ ಉಪನ್ಯಾಸ ಕಾರ್ಯಕ್ರಮದ ಎರಡನೇ ಉಪನ್ಯಾಸದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ “ಮೆಡಿಟೇಶನ್ ಮತ್ತು ರಿಲ್ಯಾಕ್ಸೇಶನ್ ಟೆಕ್ನಿಕ್ಸ್” ಎಂಬ ವಿಷಯದ ಕುರಿತು ಮಾತನಾಡಿದರು. ವಿವಿಧ ಚಟುವಟಿಕೆಗಳ ಮೂಲಕ ವಿದ್ಯಾರ್ಥಿಗಳಲ್ಲಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ವಿಧಾನಗಳನ್ನು ವಿವರಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಶ್ರೀ ರವಿರಾಜ್ ಎಸ್ ಇವರು ಕಾರ್ಯಕ್ರಮಕ್ಕೆ ಶುಭಹಾರೈಸಿದರು. ಕಾರ್ಯಕ್ರಮದಲ್ಲಿ ಎನ್.ಎಸ್.ಎಸ್ ಯೋಜನಾಧಿಕಾರಿಯಾದ ಶ್ರೀ ಕೇಶವ ಕುಮಾರ್ ಬಿ ಉಪಸ್ಥಿತರಿದ್ದರು.
ಸ್ವಯಂ ಸೇವಕಿಯರಾದ ಪುಷ್ಪಾವತಿ, ಸಿಂಚನಾ ಎ.ಎಲ್, ತೀರ್ಥ, ಯಕ್ಷಿತಾ,ಆಶಾ ಜಿ.ಎಸ್, ಉಷಾ ಜಿ.ಎಸ್ ಪ್ರಾರ್ಥನೆ ಹಾಡಿದರು, ಕೌಶಿತ ಸ್ವಾಗತಿಸಿದರು, ಗೀತಾ ವ್ಯಕ್ತಿ ಪರಿಚಯ ಮಾಡಿದರು, ಪ್ರಿಯಲತಾ ವಂದಿಸಿದರು ಹಾಗೂ ಸಂಗೀತಾ ಕಾರ್ಯಕ್ರಮ ನಿರ್ವಹಿಸಿದರು.