Published
1 month agoon
By
Akkare News
ಇದೀಗ ಮತ್ತಿಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, ಬಂಧಿತರ ಸಂಖ್ಯೆ ಆರಕ್ಕೇರಿದೆ.
ಪ್ರಮುಖ ಆರೋಪಿಯಾದ ಬಂಟ್ವಾಳ ಕನ್ಯಾನ ಮೂಲದ ಭಾಸ್ಕರ್ ಬೆಳ್ಚಪಾಡ ಯಾನೆ ಶಶಿ ತೇವರ್ (69 ವ) ಮತ್ತು ಕೆ.ಸಿ.ರೋಡ್ ನಿವಾಸಿ ಮಹಮ್ಮದ್ ನಝೀರ್ ಎಂಬಿಬ್ಬರನ್ನು ಬಂಧಿಸಲಾಗಿದೆ.
ಪೊಲೀಸರು ಭಾಸ್ಕರ್ ಬೆಳ್ಚಪಾಡನನ್ನು ಫೆ. 24 ರಂದು ಬೆಂಗಳೂರಿನ ರೈಲ್ವೇ ಸ್ಟೇಷನ್ ಬಳಿ ವಶಕ್ಕೆ ಪಡೆದು ಆತನನ್ನು ವಿಚಾರಿಸಿದಾಗ ಮಹಮ್ಮದ್ ನಝೀರ್ ನ ಬಗ್ಗೆ ಮಾಹಿತಿ ನೀಡಿದ್ದ.
ನಝೀರ್ ಮತ್ತು ಭಾಸ್ಕರ್ ಕಳೆದ ಏಳು ವರ್ಷಗಳಿಂದ ಸಂಪರ್ಕದಲ್ಲಿದ್ದು, ಕೋಟೆಕಾರ್ ಬ್ಯಾಂಕ್ ದರೋಡೆ ಕೃತ್ಯವೆಸಗಲು ಸುಮಾರು 6 ತಿಂಗಳಿನಿಂದ ಇತರ ಆರೋಪಿಗಳೊಂದಿಗೆ ಸೇರಿ ಸಂಚು ರೂಪಿಸಿ ಕೃತ್ಯವೆಸಗಿರುವುದಾಗಿ ಪ್ರಾಥಮಿಕ ತನಿಖೆಯಲ್ಲಿ ಬಾಯ್ಬಿಟ್ಟಿದ್ದಾರೆ.
ಭಾಸ್ಕರ್ ಬೆಳ್ಚಪಾಡನೊಂದಿಗೆ ಮಹಮ್ಮದ್ ನಝೀರ್ ನು ಸಂಚಿನಲ್ಲಿ ಪಾಲ್ಗೊಂಡಿದ್ದು ಕೋಟೆಕಾರ್ ವ್ಯವಸಾಯ ಸೇವಾ ಸಹಕಾರಿ ಸಂಘ (ನಿ) ಕಟ್ಟಡವನ್ನು ಆರೋಪಿಗಳಿಗೆ ತೋರಿಸಿಕೊಟ್ಟು ಡಕಾಯತಿ ನಡೆಸಬೇಕಾದ ದಿನ, ವೇಳೆ ಹಾಗೂ ಸೊಸೈಟಿಯಲ್ಲಿರುವ ಸಿಬ್ಬಂದಿಗಳ ಬಗ್ಗೆ ಮತ್ತು ಕೃತ್ಯದ ನಂತರ ತಪ್ಪಿಸಿಕೊಂಡು ಹೋಗುವ ಮಾರ್ಗ ಮುಂತಾದ ಸ್ಥಳೀಯ ಮಾಹಿತಿಯನ್ನು ತಿಳಿಸಿದ್ದ.
ಆರೋಪಿ ಭಾಸ್ಕರ್ ಬೆಳ್ಚಪಾಡ ಸುಮಾರು 25 ವರ್ಷಗಳಿಂದ ಹುಟ್ಟೂರಾದ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕನ್ಯಾನವನ್ನು ಬಿಟ್ಟು ಮುಂಬೈನಲ್ಲಿ ವಾಸವಾಗಿದ್ದು ಈತನ ವಿರುದ್ದ ದೆಹಲಿ, ಮುಂಬೈ, ಕೊಣಾಜೆ ಸೇರಿ ಬೇರೆ – ಬೇರೆ ಪೊಲೀಸ್ ಠಾಣೆಯಲ್ಲಿ ಡಕಾಯಿತಿ, ಸುಲಿಗೆ, ಶಸ್ತ್ರಾಸ್ತ್ರ ಕಾಯ್ದೆಯಡಿಲ್ಲಿ ಪ್ರಕರಣಗಳು ದಾಖಲಾಗಿದೆ.