Published
1 month agoon
By
Akkare News
ಶ್ರೀ ಕ್ಷೇತ್ರ ಧರ್ಮಸ್ಥಳ ಸೇರಿದಂತೆ ಕುಡುಪು ಶ್ರೀ ಅನಂತ ಪದ್ಮನಾಭ ದೇವಸ್ಥಾನ, ಶ್ರೀ ಮಂಗಳಾದೇವಿ ಕ್ಷೇತ್ರ, ಶರವು ಶ್ರೀ ಮಹಾಗಣಪತಿ ಕ್ಷೇತ್ರ, ಕಾವೂರು ಶ್ರೀ ಮಹಾಲಿಂಗೇಶ್ವರ ದೇಗುಲ, ಪಾಂಡೇಶ್ವರ ಮಹಾಲಿಂಗೇಶ್ವರ ದೇವಸ್ಥಾ ನ ಸೇರಿದಂತೆ ನಗರದ ವಿವಿಧ ಸನ್ನಿಧಾನಗಳಲ್ಲಿ ಧಾರ್ಮಿಕ ಕಾರ್ಯಕ್ರಮಗಳು ಜರಗಲಿದೆ.
ಬಂಟ್ವಾಳ ತಾಲೂಕಿನ ಕಾರಿಂಜೇಶ್ವರ ದೇವಸ್ಥಾನದಲ್ಲಿ ಈಗಾಗಲೇ ಜಾತ್ರೆ ಆರಂಭಗೊಂಡಿದ್ದು, ಶಿವರಾತ್ರಿ ಹಿನ್ನೆಲೆ, ಧಾರ್ಮಿಕ ಕಾರ್ಯಕ್ರಮ, ಸಂಕೀರ್ತನೆ ನಡೆಯಲಿದೆ. ನರಹರಿ ಪರ್ವತ ಕ್ಷೇತ್ರದಲ್ಲಿ ವಿಶೇಷ ಪೂಜೆ, ಜಾಗರಣೆ, ಭಜನೆ ನಡೆಯಲಿದೆ.
ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ, ನೆಟ್ಲ ದೇವಸ್ಥಾನ, ಬಂಟ್ವಾಳ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ಶ್ರೀ ಕ್ಷೇತ್ರ ಒಡಿಯೂರು, ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನ, ಉಜಿರೆ ಶ್ರೀ ಜನಾರ್ದನ ದೇವಸ್ಥಾನ, ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನ, ಪಜಿರಡ್ಕ ಶ್ರೀ ಸದಾಶಿವೇಶ್ವರ ಕ್ಷೇತ್ರ, ಇಂದಬೆಟ್ಟು ಶ್ರೀ ಅರ್ಧನಾರೀಶ್ವರ ದೇವಸ್ಥಾನ, ಬಳ್ಳಮಂಜ ಮಹಾತೋಭಾರ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನ ಸೇರಿದಂತೆ ಸೇರಿದಂತೆ ಜಿಲ್ಲೆಯ ವಿವಿಧ ದೇಗುಲಗಳಲ್ಲಿ ವಿಶೇಷ ಪೂಜೆ, ಧಾರ್ಮಿಕ ಕಾರ್ಯಕ್ರಮಗಳು ಜರುಗಲಿವೆ. ಹಬ್ಬದ ಹಿನ್ನೆಲೆಯಲ್ಲಿ ಜಿಲ್ಲೆಯ ಹೂವು, ಹಣ್ಣು ಖರೀದಿ ಜೋರಾಗಿತ್ತು.
ಉಡುಪಿ: ಶಿವರಾತ್ರಿ ವೈಭವ
ಉಡುಪಿ: ಶಿವ ದೇವಸ್ಥಾನ ಸೇರಿದಂತೆ ಜಿಲ್ಲೆಯ ವಿವಿಧೆಡೆ ಬುಧವಾರ ವೈಭವದ ಶಿವರಾತ್ರಿ ಉತ್ಸವ ನಡೆಯಲಿದೆ.
ಶ್ರೀ ಅನಂತೇಶ್ವರ, ಶ್ರೀ ಚಂದ್ರಮೌಳೀಶ್ವರ, ಶ್ರೀ ಉಮಾಮೇಶ್ವರ, ಶ್ರೀ ಬ್ರಹ್ಮಲಿಂಗೇಶ್ವರ, ಶ್ರೀ ಮಹಾಲಿಂಗೇಶ್ವರ ದೇವಸ್ಥಾನಗಳಲ್ಲಿ ಬೆಳಗ್ಗೆಯಿಂದಲೇ ವಿಶೇಷ ಪೂಜೆ, ಪಂಚಾಮೃತ ಅಭಿಷೇಕ, ವಿವಿಧ ಅರ್ಚನೆಗಳು ನಡೆಯಲಿವೆ.
ಬಿಲ್ವಾರ್ಚನೆ ವಿಶೇಷವಾಗಿ ನಡೆಯಲಿದೆ. ಮಧ್ಯಾಹ್ನ ಅನಂತರ ಸಭಾ ಕಾರ್ಯಕ್ರಮ, ಸಾಂಸ್ಕೃತಿಕ ಕಾರ್ಯಕ್ರಮದ ಜತೆಗೆ ಜಾಗರಣೆಯೂ ಇರಲಿದೆ.
ಜಾಗರಣೆ ಸಂದರ್ಭದಲ್ಲಿ ವಿವಿಧ ಭಜನ ಮಂಡಳಿಗಳಿಂದ ಭಜನೆಯೂ ಇರಲಿದೆ. ಬೆಳಗ್ಗೆ ವಿಶೇಷ ಪೂಜೆಯೊಂದಿಗೆ ಶಿವರಾತ್ರಿ ಉತ್ಸವ ಸಂಪನ್ನಗೊಳ್ಳಲಿದೆ. ಅನೇಕರು ಉಪವಾಸವಿದ್ದು ಜಾಗರಣೆ ಮಾಡಲಿದ್ದಾರೆ.