Published
1 month agoon
By
Akkare News
ಸಭೆಯಲ್ಲಿ ಮುಂಬರುವ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ನಮ್ಮ ಭಾಗವಹಿಸುವಿಕೆ ಹಾಗೂ ಬೇಕಾದ ರೂಪು ರೇಷೆಗಳು, ಪ್ರತಿನಿಧಿಗಳ ವ್ಯಾಪ್ತಿಯ ಸಮಸ್ಯೆಗಳ ಹಾಗೂ ಪರಿಹಾರ ಕಾರ್ಯಗಳ ಬಗ್ಗೆ ಕೂಲಂಕುಷವಾಗಿ ಚರ್ಚಿಸಲಾಯಿತು.
ಎಸ್ ಡಿ ಪಿ ಐ ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿಯ ಕಾರ್ಯದರ್ಶಿ ಹಾಗೂ ಪ್ರತಿನಿಧಿಗಳ ಉಸ್ತುವಾರಿಯೂ ಆಗಿರುವ ಉಸ್ಮಾನ್ ಏಕೆ ಅವರು ಸಮಾರೋಪ ಮಾತುಗಳನ್ನಾಡಿದರು. ಸಭೆಯಲ್ಲಿ ಕಬಕ ಬ್ಲಾಕ್ ಕಾರ್ಯದರ್ಶಿ ಸದ್ದಾಂ ಮುರ, ವಿಟ್ಲ ಬ್ಲಾಕ್ ಅಧ್ಯಕ್ಷರಾದ ಕಮರುದ್ದಿನ್ ಪುಣಚ, ನಗರ ಸಮಿತಿಯ ಅಧ್ಯಕ್ಷರಾದ ಯಹ್ಯಾ ಕೂರ್ನಡ್ಕ ಹಾಗೂ ಪುತ್ತೂರು ನಗರಸಭೆ ಸದಸ್ಯೆ ಫಾತಿಮತ್ ಝುಹ್ರಾ ಬನ್ನೂರು, ವಿಟ್ಲ ಪಟ್ಟಣ ಪಂಚಾಯತ್ ಸದಸ್ಯೆ ಶಾಕಿರಾ ವಿಟ್ಲ ಹಾಗೂ ವಿವಿಧ ಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು. ಕುಂಬ್ರ ಬ್ಲಾಕ್ ಅಧ್ಯಕ್ಷರಾದ ರಿಯಾಝ್ ಬಳಕ್ಕರವರು ಸ್ವಾಗತಿಸಿ ವಂದಿಸಿದರು.
ಆಸ್ಕರ್ ಫರ್ನಾಂಡಿಸ್ ಕೇಂದ್ರ ಸಚಿವರಾಗಿದ್ದ ಕಾಲದಲ್ಲಿ ತೀವ್ರ ಮರಳು ಅಭಾವ ಎದುರಾದಾಗ ಒಂದೇ ದಿನದಲ್ಲಿ ಸಿಆರ್‌ಝಡ್ ವ್ಯಾಪ್ತಿಯ ಮರಳು ದಿಬ್ಬ ತೆರವುಗೊಳಿಸುವ ಆದೇಶ ಜಾರಿ ಮಾಡಿ ಜನರಿಗೆ ಮರಳು ನೀಡುವ ಕಾರ್ಯ ಮಾಡಲಾಗಿತ್ತು. ಈಗ ಮತ್ತೆ ಮರಳು ಅಭಾವ ಸೃಷ್ಟಿ ಆಗಿರುವಾಗ ಕೇಂದ್ರ ಸರಕಾರದಿಂದ ಸಿಆರ್‌ಝಡ್ ವ್ಯಾಪ್ತಿಯಲ್ಲಿ ಮರಳು ದಿಬ್ಬ ತೆರವುಗೊಳಿಸುವ ಆದೇಶವನ್ನು ಏಕೆ ಮಾಡಲಾಗುತ್ತಿಲ್ಲ? ಎಂದು ಸ್ಪೀಕರ್ ಪ್ರಶ್ನಿಸಿದರು.