Connect with us

ಇತರ

ಗೆಜ್ಜೆಗಿರಿ,ನಂದನಬಿತ್ತಿಲನ್ನು ಪ್ರವಾಸೋಧ್ಯಮ ಕೇಂದ್ರವಾಗಿಸಿ:ವಿಧಾನ ಸಭಾ ಅಧಿವೇಶನದಲ್ಲಿ ಶಾಸಕ ಅಶೋಕ್ ರೈ ಮನವಿ. ಮುಂದಿನ ಬಜೆಟ್ ನಲ್ಲಿ ಅನುದಾನ ಇಟ್ಟು ಅಭಿವೃದ್ಧಿ : ಪ್ರವಾಸೋದ್ಯಮ ಸಚಿವ ಎಚ್ ಕೆ ಪಾಟೀಲ್

Published

on

ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಐತಿಹಾಸಿಕ ತಾಣವಾದ ಗೆಜ್ಜೆಗಿರಿ ನಂದನಬಿತ್ತಿಲನ್ನು ಪ್ರವಾಸೋಧ್ಯಮ ಕೇಂದ್ರವಾಗಿಸಬೇಕು ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ಅವರು ವಿಧಾನಸಭಾ ಅಧಿವೇಶನದಲ್ಲಿ ಸರಕಾರದ ಗಮನ ಸೆಳೆದಿದ್ದಾರೆ.

ಶಾಸಕರ ಆಗ್ರಹಕ್ಕೆ ಮಣಿದ ಸರಕಾರ ಮುಂದಿನ ಬಜೆಟ್ ಅಧಿವೇಶನಕ್ಕೆ ಮೊದಲು ಕ್ಷೇತ್ರಕ್ಕೆ ಅನುದಾನವನ್ನು ಬಿಡುಗಡೆ ಮಾಡಿ ಅಭಿವೃದ್ದಿ ಮಾಡಲಾಗುವುದು ಎಂದು ಪ್ರವಾಸೋದ್ಯಮ‌ಸಚಿವ ಎಚ್ ಕೆ ಪಾಟೀಲ್ ಭರವಸೆ ನೀಡಿದ್ದಾರೆ.

 

 

 

ಗೆಜ್ಜೆಗಿರಿ ನಂದನ ಬಿತ್ತಿಲು ಕೋಟಿ ಚೆನ್ನಯ ವೀರಪುರುಷರ ಐತಿಹಾಸಿಕ ಕ್ಷೇತ್ರವಾಗಿದೆ. ಲಕ್ಷಾಂತರ ಮಂದಿ ಭಕ್ತಾದಿಗಳು ಇಲ್ಲಿಗೆ ನಾನಾ ಜಿಲ್ಲೆಗಳಿಂದ ಆಗಮಿಸುತ್ತಿದ್ದಾರೆ. ನೂರಾರು ವರ್ಷಗಳ ಐತಿಹ್ಯ ಹೊಂದಿರುವ. ಈ ಕ್ಷೇತ್ರವನ್ನು ಪ್ರವಾಸೋಧ್ಯಮ ಕೇಂದ್ರವಾಗಿ ಮಾರ್ಪಾಡು ಮಾಡಬೇಕು ಎಂದು ಶಾಸಕರು ಆಗ್ರಹಿಸಿದ್ದಾರೆ. ಇದರ ಜೊತೆಗೆ ಪುತ್ತೂರಿನ ಬಿರುಮಲೆ ಬೆಟ್ಟವನ್ನೂ ಅಭಿವೃದ್ದಿ ಮಾಡುವಂತೆ ಮತ್ತು ಈಗಾಗಲೇ ಬಿರುಮಲೆ ಬೆಟ್ಟ ಅಭಿವೃದ್ದಿಗೆ ಎರಡು ಕೋಟಿ ಅನುದಾನ ಬಿಡುಗಡೆಯಾಗಿದ್ದು ಇನ್ನೂ ಹೆಚ್ಚಿನ ಅನುದಾನದ ಬೇಡಿಕೆಯನ್ನು‌ಶಾಸಕರು ಸರಕಾರದ‌ಮುಂದೆ ಸಲ್ಲಿಸಿದರು.

 

 

 

Continue Reading
Click to comment

Leave a Reply

Your email address will not be published. Required fields are marked *

Advertisement