Published
1 month agoon
By
Akkare Newsಡಿ.ಕೆ ಶಿವಕುಮಾರ್ ಅವರಿಗೆ ಸಿಎಂ ಆಗುವ ಯೋಗವಿದೆ ಎಂದು ನೊಣವಿನಕೆರೆ ಅಜ್ಜಯ್ಯ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ.
ಅಬ್ಬೆತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಈ ವೇಳೆ, ಶ್ರೀಮಠದ ಆಶೀರ್ವಾದದಿಂದ ಡಿಕೆಶಿ ಸಿಎಂ ಆಗ್ತಾರೆ. ರೈತರ, ವರ್ತಕರ ಹಾಗೂ ಮಠದ ಭಕ್ತರ ಆಸೆ ಅವರು ಸಿಎಂ ಆಗಲಿ ಎಂಬುದೇ ಆಗಿದೆ. ಎಲ್ಲಾ ಜನರ ಸಂಕಲ್ಪದಿಂದ ಒಂದು ದಿನ ಸಿಎಂ ಆಗ್ತಾರೆ. ಯಾವ ದಿನ ಸಿಎಂ ಆಗ್ತಾರೆ ಎಂದು ಹೇಳೋಕೆ ಆಗಲ್ಲ ಎಂದಿದ್ದಾರೆ.
ಶಿವಕುಮಾರ್ ಗಂಗಾ ಸ್ನಾನ ಮಾಡಿದ್ದಾರೆ. ಅವರ ಜೊತೆ ನಾವು ಪಾಲ್ಗೊಂಡಿದ್ದೆವು. ಆ ದೇವರ ಆಶೀರ್ವಾದ ಅವರಿಗೆ ಸಿಗಲಿ, ರಾಜ ಪ್ರತ್ಯಕ್ಷ್ಯ ದೇವರಾಗಲಿ ಎಂದು ಹಾರೈಸಿದ್ದಾರೆ.