Published
1 month agoon
By
Akkare Newsಪುತ್ತೂರು; ಹಲವು ವರ್ಷಗಳ ಪುತ್ತೂರು ಮೆಡಿಕಲ್ ಕಾಲೇಜಿನ ಕನಸು ಇದೀಗ ನಿಜವಾಗುವ ಸಾಧ್ಯತೆ ಕಂಡುಬರುತ್ತಿದೆ. ನಾಳೆ ನೆಡಯಲಿರುವ ಅಧಿವೇಶನದಲ್ಲಿ ಬಜೆಟ್ ಮಂಡನೆಯಲ್ಲಿ ಬಹುತೇಕ ಪುತ್ತೂರಿನ ಮೆಡಿಕಲ್ ಕಾಲೇಜು ಪ್ರಸ್ತಾಪ ಇರುವುದು ಬಹುತೇಕ ಖಚಿತ ಎನ್ನಲಾಗುತ್ತಿದೆ.
ಆ ಮೂಲಕ ಪುತ್ತೂರಿನ ದೊಡ್ಡ ಕನಸು ನನಸಾಗಲಿದೆ ಎಂಬ ಆಶಾಭಾವನೆ ಇದೀಗ ಪುತ್ತೂರಿನ ಜನತೆಯಲ್ಲಿ ಕಂಡು ಬಂದಿದೆ.
ಏನೇ ಇರಲಿ ಜನತೆಯ ದಶಕಗಳ ಕನಸು ಈಡೇರುವ ಹಂತದಲ್ಲಿದೆ. ಬಜೆಟ್ ನಲ್ಲಿ ಪುತ್ತೂರು ಮೆಡಿಕಲ್ ಕಾಲೇಜು ಪ್ರಸ್ತಾಪ ಬಹುತೇಕ ಖಚಿತ ಎನ್ನಲಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಮಾರ್ಚ್ ೭ರಂದು ನಾಳೆ ತಮ್ಮ ದಾಖಲೆಯ ೧೬ನೇ ಬಜೆಟ್ ಮಂಡಿಸಲಿದ್ದಾರೆ.ಮಾರ್ಚ್ ೩ರಿಂದ ವಿಧಾನ ಮಂಡಲ ಅಧಿವೇಶನ ಆರಂಭವಾಗಿದ್ದು, ಮೊದಲ ದಿನ ರಾಜ್ಯಪಾಲರು ಜಂಟಿ ಸದನ ಉದ್ದೇಶಿಸಿ ಭಾಷಣ ಮಾಡಿದ್ದರು. ಮಾರ್ಚ್ ೪ ರಿಂದ ಇಂದಿನವರೆಗೆ ರಾಜ್ಯಪಾಲರ ಭಾಷಣದ ಮೇಲೆ ಚರ್ಚೆ ನಡೆಯಲಿದೆ.ಸಿಎಂ ಸಿದ್ಧರಾಮಯ್ಯ ರಾಜ್ಯದ ಮಟ್ಟಿಗೆ ಅತ್ಯಧಿಕ ೧೬ನೇ ಬಜೆಟ್ ಮಂಡಿಸುವ ದಾಖಲೆ ಬರೆಯಲಿದ್ದಾರೆ. ಮುಖ್ಯಮಂತ್ರಿಯಾಗಿ ಇದು ೯ನೇ ಬಜೆಟ್ ಆಗಿದೆ.
ರಾಜ್ಯದಲ್ಲಿ ಜುಲೈ ೨೦೨೩ರಲ್ಲಿ ೧೪ನೇ ಬಜೆಟ್ ಮಂಡಿಸಿದಾಗಲೇ ಅತಿ ಹೆಚ್ಚು ಬಜೆಟ್ ಮಂಡಿಸಿದ ದಾಖಲೆ ಸಿದ್ದರಾಮಯ್ಯ ಅವರ ಹೆಸರಿನಲ್ಲಿದೆ. ೨೦೨೪-೨೫ನೇ ಸಾಲಿನ ಬಜೆಟ್ ಅನ್ನು ಫೆಬ್ರವರಿ ತಿಂಗಳಲ್ಲಿ ಮಂಡಿಸಿದ್ದರು. ಇದು ಅವರ ೧೫ನೇ ಬಜೆಟ್ ಆಗಿತ್ತು. ಸಿದ್ದರಾಮಯ್ಯ ಅವರ ೧೬ನೇ ಬಜೆಟ್ ಹಲವು ವೈಶಿಷ್ಠ÷್ಯಗಳನ್ನು ಹೊಂದಿದೆ. ರಾಜ್ಯದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಬಜೆಟ್ ಗಾತ್ರ ೪ ಲಕ್ಷ ಕೋಟಿ ರೂ.ಗಳನ್ನು ದಾಟಲಿದೆ ಎನ್ನಲಾಗಲಿದೆ.