Published
1 month agoon
By
Akkare Newsಪುತ್ತೂರು : ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿಗೆ ಮೆಡಿಕಲ್ ಕಾಲೇಜ್ ಬೇಕು ಎನ್ನುವ ಕೂಗು ಹಲವು ವರ್ಷಗಳಿಂದ ನಡೆಯುತ್ತಿದೆ ವಿಧಾನಸಭಾ ಚುನಾವಣೆಯಲ್ಲಿ ಪುತ್ತೂರಿನ ಶಾಸಕರಾದ ಅಶೋಕ್ ಕುಮಾರ್ ರೈ ಯವರು ಚುನಾವಣಾ ಪ್ರಣಾಳಿಕೆಯಲ್ಲಿ ಬೇಡಿಕೆಯನ್ನು ಇಟ್ಟಿದ್ದರು ಸತತ ಮುಖ್ಯಮಂತ್ರಿಗಳಿಗೆ ಮತ್ತು ಸರಕಾರಕ್ಕೆ ಒತ್ತಡವನ್ನು ತಂದು ಇಂದು ರಾಜ್ಯ ಬಜೆಟ್ ನಲ್ಲಿ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪುತ್ತೂರಿಗೆ ಹೊಸ ಮೆಡಿಕಲ್ ಕಾಲೇಜಿನನ್ನು ಘೋಷಣೆ ಮಾಡಿದ್ದಾರೆ.
ಪುತ್ತೂರಿನ ಜನತೆಯ ಪರವಾಗಿ ಮುಖ್ಯಮಂತ್ರಿಯವರಿಗೆ ಮತ್ತು ಶಾಸಕರಾದ ಅಶೋಕ್ ಕುಮಾರ್ ರೈ ಅವರಿಗೆ ಪುತ್ತೂರಿನ ಜನತೆ ಅಭಿನಂದನೆ ಸಲ್ಲಿಸಿದ್ದಾರೆ. ಘೋಷಣೆ ಆದ ತಕ್ಷಣ ಪುತ್ತೂರಿನ ಜನತೆಯ ಪರವಾಗಿ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಮೆಡಿಕಲ್ ಕಾಲೇಜ್ ಹೋರಾಟಗಾರರೊಂದಿಗೆ ಸನ್ಮಾನ್ಯ ಸಿದ್ದರಾಮಯ್ಯನವರನ್ನು ಇಂದು ವಿಧಾನಸೌಧದಲ್ಲಿ ಶಾಸಕರು ಸನ್ಮಾನಿಸಲಿದ್ದಾರೆ.