Published
4 weeks agoon
By
Akkare Newsಬೆಂಗಳೂರು: ಪೊಲೀಸ್ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ತಮ್ಮ ಸ್ವಂತ ವಾಹನದ ಮೇಲೆ ಪೊಲೀಸ್ ಎಂದು ಬರೆಸುವಂತಿಲ್ಲ. ಒಂದೇ ವೇಳೆ ಬರೆಸಿದ್ದರೇ ಅದು ಕಾನೂನು ಉಲ್ಲಂಘಿಸಿದಂತೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸ್ಪಷ್ಟ ಸೂಚನೆ ನೀಡಿದ್ದಾರೆ.
ರಾಜ್ಯದ ಪೊಲೀಸ್ ಇಲಾಖೆಯ ಅಧಿಕಾರಿಗಳು ತಮ್ಮ ಸ್ವಂತ ವಾಹನದ ಮೇಲೆ ಪೊಲೀಸ್ ಎಂದು ಬರೆಸಿಕೊಂಡು ಸಂಚಾರ ಮಾಡಲು ಕಾನೂನಿನಲ್ಲಿ ಅವಕಾಶವಿಲ್ಲ ಎಂದು ಉತ್ತರಿಸಿದ್ದಾರೆ.
ಇದೇ ವೇಳೆ ಅವರು ಹಾಗಿದ್ದಲ್ಲಿ, ಸ್ವಂತ ವಾಹನಗಳ ಮೇಲೆ ಪೊಲೀಸ್ ಎಂದು ಬರೆಸಿಕೊಂಡು ಕೆಲ ಪೊಲೀಸ್ ನೌಕರರು ಮತ್ತು ಅಧಿಕಾರಿಗಳು ಕಾನೂನಿನ ಉಲ್ಲಂಘನೆ ಮಾಡುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆಯೇ? ಬಂದಿದ್ದಲ್ಲಿ, ಇವರ ವಿರುದ್ಧ ಸರ್ಕಾರವು ತೆಗೆದುಕೊಂಡಿರುವ ಕ್ರಮಗೇಳನು? ಎಂದು ಕೇಳಿದ್ದಾರೆ.