Published
1 month agoon
By
Akkare Newsಶಿರಾಡಿ ಘಾಟಿಯಲ್ಲಿ ಚತುಷ್ಪಥ ರಸ್ತೆ ನಿರ್ಮಾಣ ಕಾಮಗಾರಿಯನ್ನು ಜೂ. 30ರೊಳಗೆ ಪೂರ್ಣಗೊಳಿಸಬೇಕಿರುವ ಹಿನ್ನೆಲೆಯಲ್ಲಿ ಒಂದು ತಿಂಗಳು ವಾಹನ ಸಂಚಾರ ಸ್ಥಗಿತಕ್ಕೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮಾಡಿದ ಮನವಿಯನ್ನು ಜಿಲ್ಲಾಡಳಿತ ತಿರಸ್ಕರಿಸಿದ್ದು. ಪರ್ಯಾಯ ರಸ್ತೆ ವ್ಯವಸ್ಥೆ ಕಲ್ಪಿಸಿ ಕಾಮಗಾರಿಗೆ ಅವಕಾಶ ಕಲ್ಪಿಸಲು ಚಿಂತನೆ ನಡೆಸಿದೆ.
ಸದ್ಯ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ-75ರ ಕಾಮಗಾರಿಗಾಗಿ ರಸ್ತೆ ಬಂದ್ ಮಾಡಲು ನಾನಾ ಸಂಘಟನೆಗಳು, ಸ್ಥಳೀಯರು ವಿರೋಧ ವ್ಯಕ್ತಪಡಿಸಿದ ನಂತರ ಜಿಲ್ಲಾಡಳಿತ ಮಾ. 15ರಿಂದ ಏಪ್ರಿಲ್ ಅಂತ್ಯದವರೆಗೆ ಶಿರಾಡಿಯಲ್ಲಿ ವಾಹನ ಸಂಚಾರ ನಿರ್ಬಂಧಿಸುವ ಬದಲು ಕಾಮಗಾರಿ ನಡೆಯುತ್ತಿರುವ ಭಾಗದಲ್ಲಿ ಏಕಮುಖ ಸಂಚಾರಕ್ಕೆ ಅವಕಾಶ ನೀಡಲು ಉದ್ದೇಶಿಸಿದೆ.