Published
4 weeks agoon
By
Akkare Newsಮಂಗಳೂರು: ಭಾರತಿಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವರದಿಯಂತೆ ಕರಾವಳಿ ಜಿಲ್ಲೆಗಳಲ್ಲಿ ಅಧಿಕ ಉಷ್ಣಾಂಶ ದಾಖಲಾಗಿದ್ದು, ಬಿಸಿಗಾಳಿ ಎಚ್ಚರಿಕೆ ನೀಡಲಾಗಿದೆ.
ಜಿಲ್ಲೆಯಲ್ಲಿ ಪ್ರಸ್ತುತ 41 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ. ಮುಂದಿನ ಎರಡು ದಿನ ಮುಂದುವರಿಯುವ ಮುನ್ಸೂಚನೆ ಇದೆ. ಇದರಿಂದ ಹೀಟ್ ವೇವ್ ಸ್ಟ್ರೋಕ್ (ಶಾಖದ ಅಲೆ)ನಿಂದಾಗಿ ಜನರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆ ಇರುತ್ತದೆ. ಪ್ರತಿಯೊಬ್ಬರೂ ಮುಂಜಾಗ್ರತೆ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ತಿಳಿಸಿದ್ದಾರೆ.
ಮಧ್ಯಾಹ್ನ 12ರಿಂದ 3 ಗಂಟೆ ವರೆಗೆ ಬಿಸಿಲಿನಲ್ಲಿ ಹೋಗುವುದನ್ನು ತಪ್ಪಿಸಿ, ಬಾಯಾರಿಕೆ ಇಲ್ಲದಿದ್ದರೂ ಸಾಕಷ್ಟು ನೀರು ಕುಡಿಯಬೇಕು. ಸಾಧ್ಯವಾದಷ್ಟು ಹಗುರವಾದ, ತಿಳಿ ಬಣ್ಣದ, ಸಡಿಲವಾದ ಮತ್ತು ರಂಧ್ರ ವಿರುವ ಹತ್ತಿ ಬಟ್ಟೆಗಳನ್ನು ಧರಿಸಬೇಕು. ದೇಹವನ್ನು ನಿರ್ಜಲೀಕರಣಗೊಳಿಸುವ ಆಲ್ಕೋಹಾಲ್, ಚಹಾ, ಕಾಫಿ ಮತ್ತು ಕಾಬೊìàನೇಟೆಡ್ ತಂಪು ಪಾನೀಯ ಸೇವನೆ ಮಾಡಬಾರದು. ಮನೆಯಲ್ಲಿ ತಯಾರಿಸಿದ ಪಾನೀಯಗಳಾದ ಎಳನೀರು, ನಿಂಬೆ ನೀರು, ಮಜ್ಜಿಗೆ ಇತ್ಯಾದಿಗಳನ್ನು ಬಳಸಿ. ದೇಹವನ್ನು ಮರುಜಲೀಕರಣ ಮಾಡಲು ಸಹಾಯ ಮಾಡುತ್ತದೆ. ಸಾಧ್ಯವಾದಷ್ಟು ವಾಹನಗಳಿಗೆ ಪುಲ್ ಟ್ಯಾಂಕ್ ಇಂಧನ ತುಂಬಿಸಬೇಡಿ ಹಾಗೂ ನೆರಳಿನಲ್ಲಿ ನಿಲ್ಲಿಸಬೇಕು ಎಂದರು.
ಸನ್‌ಸ್ಟೋಕ್ ಪೀಡಿತ ವ್ಯಕ್ತಿಯ ಚಿಕಿತ್ಸೆಗೆ ಸಲಹೆ
ವ್ಯಕ್ತಿಯನ್ನು ತಂಪಾದ ಸ್ಥಳದಲ್ಲಿ, ನೆರಳಿನ ಕೆಳಗೆ ಇರಿಸಿ. ಅವರನ್ನು ಒದ್ದೆ ಬಟ್ಟೆಯಿಂದ ಒರೆಸಿ/ಆಗಾಗ ದೇಹವನ್ನು ತೊಳೆದು ತಲೆಯ ಮೇಲೆ ಸಾಮಾನ್ಯ ತಾಪಮಾನದ ನೀರನ್ನು ಸುರಿಯಬೇಕು. ದೇಹದ ಉಷ್ಣತೆಯನ್ನು ಕಡಿಮೆ ಮಾಡುವುದು. ವ್ಯಕ್ತಿಗೆ ಒಆರ್‌ಎಸ್, ನಿಂಬೆ ಶರಬತ್ ಅಥವಾ ದೇಹವನ್ನು ಪುನರ್ಜಲೀಕರಣಗೊಳಿಸಲು ಉಪಯುಕ್ತವಾದ ಯಾವುದನ್ನಾದರೂ ನೀಡ ಬಹುದು. ವ್ಯಕ್ತಿಯನ್ನು ತತ್‌ಕ್ಷಣ ಹತ್ತಿರದ ಆರೋಗ್ಯ ಕೇಂದ್ರಕ್ಕೆ ಕರೆದುಕೊಂಡು ಹೋಗಿ ಸೂಕ್ತ ಚಿಕಿತ್ಸೆ ಕೊಡಿಸಬೇಕಾಗುತ್ತದೆ. ಶಾಖದ ಹೊಡೆತಗಳು ಮರಣಾಂತಿಕವಾಗಬಹುದು ಎಂದು ಜಿಲ್ಲಾಧಿಕಾರಿಗಳು ಹೇಳಿದರು.
ಏನೆಲ್ಲ ಕ್ರಮ ಅನುಸರಿಸಬೇಕು
– ನೇರ ಬಿಸಿಲು/ ಬಿಸಿಗಾಳಿಗೆ ಒಡ್ಡಿಕೊಳ್ಳಬೇಡಿ.
– ಬಿಸಿಲಿನ ಅವಧಿಯಲ್ಲಿ ಕೊಡೆ ಇಲ್ಲದೆ ಹೊರಗೆ ಹೋಗಬೇಡಿ.
– ಕಪ್ಪಿ /ಗಾಢ ಬಣ್ಣದ, ಹಾಗೂ ಸಿಂಥೆಟಿಕ್ ಉಡುಪುಗಳನ್ನು ಧರಿಸಬೇಡಿ.
– ನೇರವಾಗಿ ಬಿಸಿಲಿನ ಝಳಕ್ಕೆ ತಲೆ ಒಡ್ಡಬೇಡಿ.
– ಹೆಚ್ಚಿನ ಬಿಸಿಲು ಇರುವ ಅವಧಿಯಲ್ಲಿ ಶ್ರಮದಾಯಕ ದೈಹಿಕ ಕೆಲಸಗಳನ್ನು ಮಾಡಬೇಡಿ.
– ಬಿಸಿ ಚಹಾ, ಕರಿದ ಪದಾರ್ಥ ಮದ್ಯ ಸೇವಿಸಬೇಡಿ.
– ವಾಸವಿರುವ ಕೋಣೆಯಲ್ಲಿ ನೇರವಾಗಿ ಬಿಸಿಲು ಬೀಳುವುದನ್ನು ತಪ್ಪಿಸಿ.
– ಶಾಖಾಘಾತಕ್ಕೊಳಗಾದ ವ್ಯಕ್ತಿಯನ್ನು ಕೂಡಲೇ ತಂಪಾದ ಸ್ಥಳಕ್ಕೆ ರವಾನಿಸಬೇಕು.
– ಪ್ರಥಮ ಚಿಕಿತ್ಸೆ ನೀಡಲು ವಿಳಂಬ ಮಾಡಬಾರದು.
ಸುಳ್ಯದಲ್ಲಿ ದಾಖಲೆಯ 41.4 ಡಿ.ಸೆ. ತಾಪಮಾನ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ತಾಪಮಾನ ಏರಿಕೆಯಾಗುತ್ತಿದ್ದು, ಫೆ.11ರ ಬೆಳಗ್ಗೆ 8.30ಕ್ಕೆ ಕೊನೆಗೊಂಡ 24 ಗಂಟೆಯ ಅವಧಿಯಲ್ಲಿ ಸುಳ್ಯದಲ್ಲಿ ರಾಜ್ಯದಲ್ಲೇ ಅತ್ಯಧಿಕ 41.4 ಡಿ.ಸೆ. ಗರಿಷ್ಠ ತಾಪಮಾನ ದಾಖಲಾಗಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಯ ಅನೇಕ ಕಡೆಗಳಲ್ಲಿ ಮತ್ತು ಉಡುಪಿ ಮತ್ತು ಕೊಡಗು ಜಿಲ್ಲೆಯ ಕೆಲವು ಕಡೆ 38 ಡಿ.ಸೆ.ಗೂ ಅಧಿಕ ತಾಪಮಾನ ಉಂಟಾಗಿದೆ. ಉತ್ತರ ಕನ್ನಡ ಜಿಲ್ಲೆಯ 10 ಕಡೆಗಳಲ್ಲಿ, ದಕ್ಷಿಣ ಕನ್ನಡ ಜಿಲ್ಲೆಯ ಎರಡು ಕಡೆ ಮತ್ತು ಉಡುಪಿ ಜಿಲ್ಲೆಯ ಒಂದು ಕಡೆ 40 ಡಿ.ಸೆ.ಗೂ ಅಧಿಕ ತಾಪಮಾನ ದಾಖ ಲಾಗಿದೆ. ಹವಾಮಾನ ಇಲಾಖೆ ಮುನ್ಸೂಚನೆ ಪ್ರಕಾರ ಮುಂದಿನ ಎರಡು ದಿನಗಳಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಯಲ್ಲಿ ಭಾರೀ ಬಿಸಿಲು ಮತ್ತು ಆಧ್ರ ವಾತಾವರಣ ಇರುವ ಸಾಧ್ಯತೆ ಇದೆ.
ಜಿಲ್ಲೆಯ ವಿವಿಧೆಡೆ ಎಲ್ಲೆಲ್ಲಿ ಎಷ್ಟು ತಾಪಮಾನ:
ದ. ಕ. ಜಿಲ್ಲೆಯ ಪಾಣೆಮಂಗಳೂರಿನಲ್ಲಿ 40.5 ಡಿ.ಸೆ. ತಾಪಮಾನ, ಮೂಡುಬಿದಿರೆಯಲ್ಲಿ 39, ಕೊಕ್ಕಡ ದಲ್ಲಿ 40.3, ಪುತ್ತೂರಿನಲ್ಲಿ 40.2, ಬಂಟ್ವಾಳದಲ್ಲಿ 38, ಸುಳ್ಯದಲ್ಲಿ 41.4, ಬೆಳ್ತಂಗಡಿಯಲ್ಲಿ 38.8, ಕಡಬದಲ್ಲಿ 40.4, ವಿಟ್ಲದಲ್ಲಿ 38.6, ಉಪ್ಪಿನಂಗಡಿಯಲ್ಲಿ 40, ಸಂಪಾಜೆಯಲ್ಲಿ 40.7, ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ 38 ಡಿ.ಸೆ. ಗರಿಷ್ಠ ತಾಪಮಾನ ದಾಖಲಾಗಿತ್ತು. ದ. ಕ. ಜಿಲ್ಲೆಯಲ್ಲಿ ಮಂಗಳವಾರ ಬಿಸಿಲಿನ ವಾತಾವರಣವಿತ್ತು. ಬೆಳಗ್ಗೆ ಮೋಡದಿಂದ ಕೂಡಿದ ವಾತಾವರಣ