Published
4 weeks agoon
By
Akkare News
ಸುಳ್ಯ: ಮಧ್ಯಾಹ್ನ ನಂತರ ಪುತ್ತೂರು ಕಡಬ, ಸುಳ್ಯ ತಾಲೂಕಿನ ಹಲವೆಡೆ ಉತ್ತಮ ಮಳೆಯಾಗುತ್ತಿದೆ. ಬುಧವಾರ ಮಧ್ಯಾಹ್ನದವರೆಗೂ ಬಿಸಿಲಿನ ವಾತಾವರಣವಿದ್ದು, ಬಳಿಕ ಮೋಡ ಕವಿದು ಗಾಳಿ ಸಹಿತ ಉತ್ತಮ ಮಳೆಯಾಗತೊಡಗಿದೆ. ಇತ್ತೀಚೆಗೆ ಸುಳ್ಯ ತಾಲೂಕಿನಲ್ಲಿ 40 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿತ್ತು.
ಭಾರತೀಯ ಹವಾಮಾನ ಇಲಾಖೆ ಮಾರ್ಚ್ 11 ರಿಂದ 4 ದಿನಗಳ ಕಾಲ ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡು ಪ್ರದೇಶಗಳಲ್ಲಿ ಮಳೆಯಾಗುವ ಮುನ್ಸೂಚನೆ ನೀಡಿತ್ತು. ಎಪ್ರಿಲ್ ತಿಂಗಳಿನಲ್ಲಿ ಬಹುತೇಕ ಪೂರ್ವ ಮುಂಗಾರು ರಾಜ್ಯಕ್ಕೆ ಕಾಲಿಡುವ ಸಾಧ್ಯತೆ ಹೆಚ್ಚಾಗಿದೆ.