Published
3 weeks agoon
By
Akkare Newsಬೆಂಗಳೂರು: ಮುಖ್ಯಮಂತ್ರಿ ಹುದ್ದೆ ಮತ್ತು ಕೆಪಿಸಿಸಿ ಅಧ್ಯಕ್ಷರು ಸ್ಥಾನ ಬದಲಾವಣೆ ವಿಚಾರವಾಗಿ ಕಾಂಗ್ರೆಸ್ ನಲ್ಲಿ ನಡೆಯುತ್ತಿರುವ ಆಂತರಿಕ ಕಚ್ಚಾಟದ ನಡುವೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹುದ್ದೆ ಬಿಟ್ಟುಕೊಡುವ ವಿಚಾರಕ್ಕೆ ತೆರೆ ಎಳೆದಂತೆ ಕಾಣುತ್ತಿದೆ.
ಹೌದು… ಇಂದು ಬಿಜೆಪಿ ಶಾಸಕರು ಸದನದ ಬಾವಿಗಿಳಿದು ಪ್ರತಿಭಟನೆ ನಡೆಸುವಾಗ ವಿರೋಧ ಪಕ್ಷದ ನಾಯಕ ಆರ್ ಅಶೋಕ ಸಿದ್ದರಾಮಯ್ಯ ಇನ್ನು ಎಷ್ಟು ದಿನ ಈ ಹುದ್ದೆಯಲ್ಲಿರುತ್ತಾರೋ ಗೊತ್ತಿಲ್ಲ ಎಂದು ಉದ್ದೇಶಪೂರ್ವಕವಾಗಿ ಕಾಲೆಳೆದರು. ಇಂಥದೊಂದು ಅವಕಾಶಕ್ಕಾಗಿ ಕಾಯುತ್ತಿದ್ದ ಸಿದ್ದರಾಮಯ್ಯ, ಐದು ವರ್ಷ ಅವಧಿಗೂ ನಾನೇ ಮುಖ್ಯಮಂತ್ರಿಯಾಗಿರುತ್ತೇನೆ. ಅದಾದ ನಂತರದ ಐದು ವರ್ಷದ ಅವಧಿಗೂ ನಾನೇ ಮುಂದುವರಿಯುತ್ತೇನೆ ಎಂದು ನಿರ್ಭಾವುಕಾರಾಗಿ ಹೇಳಿದ್ದಾರೆ.
ಸಿದ್ದರಾಮಯ್ಯರ ಈ ಮಾತುಗಳು ಬಿಜೆಪಿ ಶಾಸಕರು ಬಾಯಿ ಮುಚ್ಚಿಸಿರಬಹುದು. ಅದರೆ ಕಾಂಗ್ರೆಸ್ ಪಾಳೆಯದಲ್ಲಿ ಸಂಚಲನ ಮೂಡಿದೆ. ಇದಕ್ಕೆ ಡಿಕೆ ಶಿವಕುಮಾರ್ ಬಣ ಯಾವ ರೀತಿ ಪ್ರತಿಕ್ರಿಯಿಸಲಿದೆ ಎಂಬುದನ್ನು ಕಾದುನೋಡಬೇಕಿದೆ.