Published
4 weeks agoon
By
Akkare Newsಪುತ್ತೂರು: ಪುತ್ತೂರು ನಗರಾಭಿವೃದ್ಧಿ ಪ್ರಾಧಿಕಾರ(ಪುಡಾ) ಅಧ್ಯಕ್ಷರಾಗಿ ಅಮಳ ರಾಮಚಂದ್ರ ಅವರು ಆಯ್ಕೆಗೊಳ್ಳುವುದು ಬಹುತೇಕ ಖಚಿತಗೊಂಡಿದ್ದು ಅಧಿಕೃತ ಘೋಷಣೆಯಷ್ಟೇ ಬಾಕಿಯಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಅಮಳ ರಾಮಚಂದ್ರ ಅವರು ಪುತ್ತೂರು ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಮತ್ತು ಪಕ್ಷದ ಇನ್ನಿತರ ಹುದ್ದೆಗಳನ್ನು ನಿಭಾಯಿಸಿದ್ದಾರೆ. ಕಾಂಗ್ರೆಸ್ ಪಕ್ಷದ ಪ್ರಮುಖ ಭಾಷಣಗಾರರೂ ಆಗಿರುವ ಅಮಳ ರಾಮಚಂದ್ರ ಅವರು ಪಕ್ಷದ ಯೋಜನೆ, ಸಿದ್ದಾಂತ, ಕಾರ್ಯಕ್ರಮಗಳನ್ನು ಪ್ರಬಲವಾಗಿ ಸಮರ್ಥಿಸುವ ಮುಂಚೂಣಿ ನಾಯಕರಾಗಿ ಗುರುತಿಸಿಕೊಂಡಿದ್ದಾರೆ.