Published
2 weeks agoon
By
Akkare Newsಮಡಿಕೇರಿ ಮಾ.21(ಕರ್ನಾಟಕ ವಾತೆ):-ಕಾವೇರಿ ಆರತಿ ಕಾರ್ಯಕ್ರಮದ ಪ್ರಯುಕ್ತ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ನಾಡಿನ ಪುಣ್ಯಕ್ಷೇತ್ರ ಭಾಗಮಂಡಲ ಭಗಂಡೇಶ್ವರ ಹಾಗೂ ಕಾವೇರಿ ನದಿ ಉಗಮ ಸ್ಥಾನ ತಲಕಾವೇರಿಗೆ ಶುಕ್ರವಾರ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.
ಪುಣ್ಯಕ್ಷೇತ್ರ ಭಾಗಮಂಡಲ ಭಗಂಡೇಶ್ವರ ದೇವಾಲಯದ ತ್ರೀವೇಣಿ ಸಂಗಮಕ್ಕೆ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದ ಅವರು ತ್ರಿವೇಣಿ ಸಂಗಮದಲ್ಲಿ ತೀರ್ಥ ಪ್ರಸಾದ ಪಡೆದರು.
ಬಳಿಕ ಮಹಾಗಣಪತಿ, ಭಗಂಡೇಶ್ವರ, ಮಹಾವಿಷ್ಣು, ಸುಬ್ರಮಣ್ಯ ದೇವರಿಗೆ ವಿಶೇಷ ಪೂಜೆ ಹಾಗೂ ಪ್ರಾರ್ಥನೆ ಸಲ್ಲಿಸಿ ಮುಂದಿನ ದಿನಗಳಲ್ಲಿ ಉತ್ತಮ ಮಳೆಯಾಗಿ ನಾಡಿಗೆ ಸಮೃದ್ಧಿ ತರುವಂತಾಗಲಿ ಎಂದು ಪ್ರಾರ್ಥಿಸಿದರು.
ನಂತರ ತಲಕಾವೇರಿಗೆ ಭೇಟಿ ನೀಡಿ ತಲಕಾವೇರಿಯ ಬ್ರಹ್ಮಕುಂಡಿಕೆ ಬಳಿಯ ಕೊಳದಲ್ಲಿ ಪುಣ್ಯಸ್ನಾನ ಮಾಡಿದರು. ಉಪ ಮುಖ್ಯಮಂತ್ರಿ ಅವರ ಜತೆ ಶಾಸಕರಾದ ಡಾ. ಮಂತರ್ ಗೌಡ ಅವರು ಪುಣ್ಯಸ್ನಾನ ಮಾಡಿದರು.
ಬಳಿಕ ಮಹಾಗಣಪತಿಗೆ ವಿಶೇಷ ಪೂಜೆ ಸಲ್ಲಿಸಿ, ಬ್ರಹ್ಮಕುಂಡಿಕೆಯಲ್ಲಿ ಕಾವೇರಿ ಮಾತೆಗೆ ವಿಶೇಷ ಪೂಜೆ ಸಲ್ಲಿಸಿ, ಕುಂಕುಮಾರ್ಚನೆ ನೆರವೇರಿಸಿದರು. ಇಡೀ ನಾಡಿಗೆ ತಾಯಿ ಕಾವೇರಿ ಮಾತೆ ಕುಡಿಯುವ ನೀರು ಕಲ್ಪಿಸುತ್ತಿದ್ದು, ಕುಡಿಯುವ ನೀರಿನ ಮಹತ್ವ ಬಗ್ಗೆ ಸಂದೇಶ ಸಾರುವ ನಿಟ್ಟಿನಲ್ಲಿ ‘ಕಾವೇರಿ ಆರತಿ’ ಕಾರ್ಯಕ್ರಮವನ್ನು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.