Published
12 months agoon
By
Akkare News
ಉಡುಪಿ, : ಮಲ್ಪೆ ಬಂದರಿನಲ್ಲಿ ಮಹಿಳೆಯನ್ನು ಮರಕ್ಕೆ ಕಟ್ಟಿ ಹಾಕಿ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ಮಲ್ಪೆಮೀನುಗಾರರ ಸಂಘದ ನೇತೃತ್ವದಲ್ಲಿ ಮಾ.22ರಂದು ನಡೆದ ಪ್ರತಿಭಟನಾ ಸಭೆಯಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಹಿಂದು ಯುವ ಸೇನೆ ಮಾಜಿ ಜಿಲ್ಲಾಧ್ಯಕ್ಷ ಮಂಜು ಕೊಳ ವಿರುದ್ಧ ಮಲ್ಪೆ ಪೊಲೀಸ್ ಠಾಣೆಯಲ್ಲಿ ಸುಮೋಟೋ ಪ್ರಕರಣ ದಾಖಲಾಗಿದೆ.
ಪ್ರತಿಭಟನಾ ಸಭೆಯಲ್ಲಿ ಸಭೆಯಲ್ಲಿ ಮಾತನಾಡಿದ್ದ ಮಂಜು ಕೊಳ, ಗಂಗೊಳ್ಳಿಯ ಒಂದು ಘಟನೆ ನೆನಪಿಟ್ಟುಕೊಳ್ಳಿ ಎಂದು ಇದೇ ಎಸ್ಪಿಗೆ ಹೇಳುತ್ತೇನೆ. ಒಬ್ಬ ಮೀನುಗಾರನನ್ನು ಒಳಗೆ ಹಾಕಿದರು. ಅದಕ್ಕೆ 10,000 ಜನ ಮೀನುಗಾರರು ಒಟ್ಟಾದಾಗ ಇದೇ ಎಸ್ಪಿ ಹೋಗಿ ಅವರ ಕಾಲು ಹಿಡಿದು ವಾಪಾಸು ಕರೆದುಕೊಂಡು ಬಂದರು. ಆ ಘಟನೆ ಮತ್ತೆ ಆಗಲು ಬಿಡಬೇಡಿ. ನೆನಪಿಟ್ಟುಕೊಳ್ಳಿ ಮಾ.25ರೊಳಗೆ ರಘುಪತಿ ಭಟ್ ಹೇಳಿದಾಗ ಆ ಸೆಕ್ಷನ್‌ನ ಬದಲಾಯಿಸದಿದ್ದರೆ ಗಂಗೊಳ್ಳಿಯ ಕಥೆ ಇಲ್ಲಿ ಆಗುತ್ತದೆ ಎಂದು ಹೇಳಿದ್ದರು.
ನಾವು ಕರಾವಳಿ ಭಾಗದ ಜನ, ಮುಂದೆ ನೋಡಿ ಗಂಗೊಳ್ಳಿಯಿಂದ ಮಂಗಳೂರಿನವರೆಗೆ ಜನ ಒಟ್ಟು ಮಾಡಿ ಹೆದ್ದಾರಿ ಬಂದ್ ಮಾಡದಿದ್ದರೆ ನಾವು ಮೀನುಗಾರರೆ ಅಲ್ಲ. ದಯಮಾಡಿ ಬಂಧಿಸಿದ 4 ಮಹಿಳೆಯರನ್ನು ಬಿಡುಗಡೆ ಮಾಡಬೇಕು ಎಂದು ಹೇಳಿದ್ದರು. ಈ ಮೂಲಕ ಮಂಜು ಕೊಳ, ಸಾರ್ವಜನಿಕರಿಂದ ಇಂತಹ ಅಪರಾಧ ಮಾಡಿಸಲು
ಪ್ರಚೋದಿಸುತ್ತ ಉದ್ರೇಕ ಭಾಷಣ ಮಾಡಿರುವುದಾಗಿ ದೂರಲಾಗಿದೆ.