Connect with us

ಇತ್ತೀಚಿನ ಸುದ್ದಿಗಳು

ಮಾ.26:ಪುತ್ತೂರು ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘದ 19ನೇ ಪ್ರತಿಷ್ಠಾ ವರ್ಧಂತ್ಯುತ್ಸವ, ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ

Published

on

ಪುತ್ತೂರು: ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘ ಪುತ್ತೂರು ಮತ್ತು ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಮಂದಿರ ಪುತ್ತೂರು ಇದರ ವತಿಯಿಂದ 19ನೇ ಪ್ರತಿಷ್ಠಾ ವರ್ಧಂತ್ಯುತ್ಸವ ಹಾಗೂ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆಯು ಅರ್ಚಕರಾದ ಜಗದೀಶ ಶಾಂತಿಯವರ ನೇತೃತ್ವದಲ್ಲಿ ವೈದಿಕ ವಿಧಿ-ವಿಧಾನಗಳೊಂದಿಗೆ ಜರಗಲಿದೆ.

 

ಪ್ರಾತಃಕಾಲ ಬೆಳಿಗ್ಗೆ ಗಂಟೆ 6ರಿಂದ ಸ್ವಸ್ತಿ ಪುಣ್ಯಾಹ, 7ರಿಂದ ಗಣಹೋಮ, 7.30 ರಿಂದ ನವಕ ಕಲಶಾಭಿಷೇಕ, 8 ರಿಂದ ಬ್ರಹ್ಮಶ್ರೀ ನಾರಾಯಣಗುರು ಸಹಸ್ರನಾಮಾವಳಿ, 9.30 ರಿಂದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ, ಮಧ್ಯಾಹ್ನ 12ಕ್ಕೆ ಮಹಾಪೂಜೆ, 1 ರಿಂದ ಪ್ರಸಾದ ವಿತರಣೆ ಮತ್ತು ಪ್ರಸಾದ ಭೋಜನ ನಡೆಯಲಿದೆ.

 

ಕಾರ್ಯಕ್ರಮದಲ್ಲಿ ಬಿಲ್ಲವ ಸಂಘದ ಗ್ರಾಮ ಸಮಿತಿಗಳು, ಬಿಲ್ಲವ ಮಹಿಳಾ ವೇದಿಕೆ ಪುತ್ತೂರು, ಯುವವಾಹಿನಿ ಪುತ್ತೂರು, ಉಪ್ಪಿನಂಗಡಿ, ಕಡಬ ಘಟಕಗಳು, ಬಿಲ್ಲವ ವಿದ್ಯಾರ್ಥಿ ಸಂಘ ಪುತ್ತೂರು, ತಾಲೂಕಿನ ಮೂರ್ತೆದಾರರ ಸೇವಾ ಸಹಕಾರಿ ಸಂಘಗಳು ಸಹಕಾರ ನೀಡಲಿದ್ದು, ಭಕ್ತಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಸಹಕರಿಸಬೇಕಾಗಿ ಪುತ್ತೂರು ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘದ ಅಧ್ಯಕ್ಷ ಸತೀಶ್ ಕುಮಾರ್ ಕೆಡೆಂಜಿ, ಕಾರ್ಯದರ್ಶಿ ಚಿದಾನಂದ ಸುವರ್ಣ, ಉಪಾಧ್ಯಕ್ಷರಾದ ಅಶೋಕ್ ಕುಮಾರ್ ಪಡ್ಪು, ಶ್ರೀಮತಿ ವಿಮಲ ಸುರೇಶ್, ಜೊತೆ ಕಾರ್ಯದರ್ಶಿ ದಯಾನಂದ ಕರ್ಕೇರಾ, ಕೋಶಾಧಿಕಾರಿ ಬಿ.ಟಿ ಮಹೇಶ್ಚಂದ್ರ ಸಾಲಿಯಾನ್ ಹಾಗೂ ಸರ್ವ ಸದಸ್ಯರು ಮತ್ತು ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಮಂದಿರದ ಕಾರ್ಯನಿರ್ವಹಣಾಧಿಕಾರಿ ಉದಯಕುಮಾರ್ ಕೋಲಾಡಿ, ಸದಸ್ಯರಾದ ಸಜ್ಜನ್ ಕುಮಾರ್ ಕನ್ನಾರ್‌ನೂಜಿ, ರಾಜೇಶ್ ಪೂಜಾರಿ ಪಾಣಾಜೆ, ಉಮೇಶ್ ಬಾಯಾರ್‌ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

 

Continue Reading
Click to comment

Leave a Reply

Your email address will not be published. Required fields are marked *

Advertisement