Published
7 days agoon
By
Akkare Newsಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ದೆಹಲಿಯಲ್ಲಿ ಭೇಟಿಯಾದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ದಂಪತಿ ಮೋದಿಯವರ ಆಶೀರ್ವಾದ ಪಡೆದಿದ್ದಾರೆ. ಈ ವೇಳೆ ಅವರು ಮಧ್ವಾಚಾರ್ಯ ವಿರಚಿತ 750 ವರ್ಷಗಳ ಹಿಂದಿನ ʼಸರ್ವಮೂಲʼ ಗ್ರಂಥವನ್ನು ಪ್ರಧಾನಿ ಮೋದಿಗೆ ಉಡುಗೊರೆಯಾಗಿ ನೀಡಿದ್ದಾರೆ. ಇತ್ತೀಚೆಗಷ್ಟೆ ಖ್ಯಾತ ಕರ್ನಾಟಕ ಶಾಸ್ತ್ರೀಯ ಸಂಗೀತ ಗಾಯಕಿ ಶಿವಶ್ರೀ ಸ್ಕಂದಪ್ರಸಾದ್ ಅವರೊಂದಿಗೆ ಬೆಂಗಳೂರಿನ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿವಾಹವಾಗಿದ್ದರು.
ನವದೆಹಲಿ, ಮಾರ್ಚ್ 28: ಇತ್ತೀಚೆಗಷ್ಟೇ ಮದುವೆಯಾಗಿರುವ ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಮತ್ತು ಖ್ಯಾತ ಗಾಯಕಿ ಶಿವಶ್ರೀ ಸ್ಕಂದಪ್ರಸಾದ್ ಇಂದು ಭಾರತದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದಿದ್ದಾರೆ. ಇದೇ ಸಂದರ್ಭದಲ್ಲಿ ಅವರು ಪ್ರಧಾನಿ ಮೋದಿಯವರಿಗೆ ಮಧ್ವಾಚಾರ್ಯ ವಿರಚಿತ 750 ವರ್ಷಗಳ ಹಿಂದಿನ ಸಂರಕ್ಷಿತ ʼಸರ್ವಮೂಲʼ ಗ್ರಂಥವನ್ನು ಉಡುಗೊರೆಯಾಗಿ ನೀಡಿದ್ದು ವಿಶೇಷ.
ನಮ್ಮನ್ನು ಆಶೀರ್ವದಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ನಮ್ಮ ಮದುವೆ ಸಮಾರಂಭದ ಫೋಟೋಗಳನ್ನು ಈಗಾಗಲೇ ವೀಕ್ಷಿಸಿರುವುದಾಗಿ ತಿಳಿಸಿದ್ದು ತುಂಬಾ ಖುಷಿಯನ್ನುಂಟು ಮಾಡಿದೆ ಎಂದು ಸಂಸದ ತೇಜಸ್ವಿ ಸೂರ್ಯ ಸಂತಸ ಹಂಚಿಕೊಂಡಿದ್ದಾರೆ.