Published
6 days agoon
By
Akkare Newsಯುಗಾದಿ ಹಬ್ಬಕ್ಕೆ ಕೇಂದ್ರ ಸರ್ಕಾರ ಸಿಹಿ ಸುದ್ದಿ ನೀಡಿದೆ. ಕೇಂದ್ರ ಸರ್ಕಾರಿ ನೌಕರರ ತುಟ್ಟಿ ಭತ್ಯೆಯನ್ನು ಏರಿಕೆ ಮಾಡಿದೆ. ಶೇಕಡಾ 2ರಷ್ಟು ಡಿಎ ಏರಿಕೆ ಮಾಡಲು ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ.
ನವದೆಹಲಿ(ಮಾ.29): ಯುಗಾದಿ ಸಂದರ್ಭದಲ್ಲೇ ಕೇಂದ್ರ ಸರ್ಕಾರಿ ನೌಕರರಿಗೆ ಮೋದಿ ಸರ್ಕಾರ ಸಿಹಿ ಸುದ್ದಿ ಕೊಟ್ಟಿದೆ. ಕೇಂದ್ರ ಸರ್ಕಾರಿ ನೌಕರರ ತುಟ್ಟಿ ಭತ್ಯೆಯನ್ನು ಶೇ.2ರಷ್ಟು ಹೆಚ್ಚಿಸಲು ಕೇಂದ್ರ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ. ಈ ಮೂಲಕ ನೌಕರರ ತುಟ್ಟಿ ಭತ್ಯೆ ಶೇ.53ರಿಂದ ಶೇ.55ಕ್ಕೇರಿದಂತಾಗಿದೆ.