Published
2 days agoon
By
Akkare Newsನವದೆಹಲಿ: ಏ.2ರಂದು ವಕ್ಫ್ ತಿದ್ದುಪಡಿ ಮಸೂದೆ ಮಂಡನೆಯಾಗಲಿದ್ದು, ಅದಕ್ಕೂ ಮುನ್ನ, ಕಾಂಗ್ರೆಸ್ ಮಂಗಳವಾರ ಲೋಕಸಭೆಯಲ್ಲಿನ ತನ್ನ ಎಲ್ಲಾ ಸಂಸದರಿಗೆ ವಿಪ್ ಜಾರಿಗೊಳಿಸಿದೆ.
ಮುಂದಿನ 3 ದಿನಗಳವರೆಗೆ ಕಾಂಗ್ರೆಸ್ ಸಂಸದರು ಸದನದಲ್ಲಿ ಕಡ್ಡಾಯವಾಗಿ ಇರಲೇಬೇಕೆಂದು ಸೂಚಿಸಿದೆ.
ವಿವಾದಾತ್ಮಕ ವಕ್ಫ್ ತಿದ್ದುಪಡಿ ಮಸೂದೆಯನ್ನು ಬುಧವಾರ ಲೋಕಸಭೆಯಲ್ಲಿ ಚರ್ಚೆ ಮತ್ತು ಅಂಗೀಕಾರಕ್ಕಾಗಿ ಕೈಗೆತ್ತಿಕೊಳ್ಳಲಾಗುವುದು ಎಂದು ಎನ್ಡಿಎ ಸರ್ಕಾರ ಸ್ಪಷ್ಟಪಡಿಸಿದೆ. ಹೀಗಾಗಿ ಕಾಂಗ್ರೆಸ್ ಪಕ್ಷವು 3 ಸಾಲಿನ ವಿಪ್ ಜಾರಿಗೊಳಿಸಿದೆ.