Published
14 hours agoon
By
Akkare Newsಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಬರೆದು ಉತ್ತೀರ್ಣರಾಗಿ ವೃತ್ತಿಯನ್ನು ಪಡೆದುಕೊಳ್ಳಬೇಕಾದರೆ ಕಠಿಣ ಮತ್ತು ನಿರಂತರವಾದ ಪ್ರಯತ್ನ ಮುಖ್ಯವಾಗಿರುತ್ತದೆ. ಹಾಗೂ ಪರೀಕ್ಷೆಗಳಲ್ಲಿ ಹೆಚ್ಚಾಗಿ ಬರುವಂತಹ ಗಣಿತದ ಲೆಕ್ಕಗಳನ್ನು ಬಗೆಹರಿಸುವ ಕೌಶಲ್ಯವನ್ನು ಬೆಳೆಸಿಕೊಳ್ಳಬೇಕೆಂದು ಉಪ್ಪಿನಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಗಣಿತ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಶ್ರೀ ಕಾರ್ತಿಕ್ ಕೆ ಹೇಳಿದರು.
ಇವರು ಇತ್ತೀಚೆಗೆ ಉಪ್ಪಿನಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಆಂತರಿಕ ಗುಣಮಟ್ಟ ಭರವಸಕೋಶ ಹಾಗೂ ರಾಷ್ಟ್ರೀಯ ಸೇವಾ ಯೋಜನಾ ಘಟಕಗಳು ಆಯೋಜಿಸಿದ ಸರಣಿ ಉಪನ್ಯಾಸ ಕಾರ್ಯಕ್ರಮದ ಏಳನೇ ಉಪನ್ಯಾಸದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ “ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಗಣಿತ” ಎಂಬ ವಿಷಯದ ಕುರಿತು ಮಾತನಾಡಿದರು.
ಆಪ್ಟಿಟ್ಯೂಡ್ ಪರೀಕ್ಷೆಯಲ್ಲಿ ಯಾವ ರೀತಿಯ ಪ್ರಶ್ನೆಗಳು ಇರುತ್ತದೆ ಎಂಬುದನ್ನು ಅಧ್ಯಯನ ಮಾಡಿ ಹಲವಾರು ಉದಾಹರಣೆಗಳನ್ನು ಅಭ್ಯಾಸ ಮಾಡಿಕೊಳ್ಳಬೇಕು ಎಂದು ಕರೆ ನೀಡಿದರು. ಕಾರ್ಯಕ್ರಮದಲ್ಲಿ ಎನ್.ಎಸ್.ಎಸ್ ಯೋಜನಾಧಿಕಾರಿಗಳಾದ ಡಾ. ಹರಿಪ್ರಸಾದ್ ಎಸ್ ಮತ್ತು ಶ್ರೀ ಕೇಶವ್ ಕುಮಾರ್ ಬಿ ಇವರುಗಳು ಉಪಸ್ಥಿತರಿದ್ದರು. ಸ್ವಯಂ ಸೇವಕಿಯರಾದ ಜಯಶ್ರೀ, ಮನ್ವಿತ, ಶ್ರೇಷ್ಠ ಪ್ರಾರ್ಥಿಸಿದರು, ಲಾವಣ್ಯ ಸ್ವಾಗತಿಸಿದರು, ಮನೀಶ್ ಯು ಸಂಪನ್ಮೂಲ ವ್ಯಕ್ತಿಯ ಪರಿಚಯ ಮಾಡಿದರು, ಅಂಜಲಿ ವಂದಿಸಿದರು ಹಾಗೂ ದಿಶಾ ಎಮ್. ಎಸ್ ಕಾರ್ಯಕ್ರಮ ನಿರ್ವಹಿಸಿದರು.