Published
5 days agoon
By
Akkare Newsಮೂಡಿಗೆರೆ ಕಡೆಯಿಂದ ಬೆಳ್ತಂಗಡಿಯತ್ತ ಸಂಚರಿಸುತ್ತಿದ್ದ ಆಮ್ನಿ ಕಾರೊಂದು ರಾಷ್ಟ್ರೀಯ ಹೆದ್ದಾರಿಯ ಮುಂಡಾಜೆ ಗ್ರಾಮದ ಸೀಟು ಸಮೀಪ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ಹೊಂಡಕ್ಕೆ ಉರುಳಿ ಮರಕ್ಕೆ ಢಿಕ್ಕಿ ಹೊಡೆದ ಘಟನೆ ಸೋಮವಾರ ನಡೆದಿದೆ.
ತಾಲೂಕಿನ ಕಾಲೇಜೊಂದರ ದಾಖಲಾತಿಗೆ ಆಗಮಿಸುತ್ತಿದ್ದ ಸಕಲೇಶಪುರ ಕಡೆಯ ಪ್ರಯಾಣಿಕರು ಇದರಲ್ಲಿ ಪ್ರಯಾಣಿಸುತ್ತಿದ್ದು ಓರ್ವ ಮಹಿಳೆ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.