Published
4 days agoon
By
Akkare Newsಚಾಲಕನ ನಿಯಂತ್ರಣ ತಪ್ಪಿ ಕೆಎಸ್ಸಾರ್ಟಿಸಿ ಬಸ್ ರಸ್ತೆಯ ಕೆಳಭಾಗದಲ್ಲಿದ್ದ ಮನೆಯ ಮೇಲೆ ಪಲ್ಟಿಯಾಗಿ ಬಿದ್ದ ಘಟನೆ ಕೊಪ್ಪ ತಾಲೂಕು, ಜಲದುರ್ಗ ಗ್ರಾಮದ ಬಳಿ ನಡೆದಿದ್ದು, ಬಸ್ಸಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಮನೆಯ ಛಾವಣಿಗೆ ಹಾನಿಯಾಗಿದೆ.
ಬೆಂಗಳೂರಿನಿಂದ ಶೃಂಗೇರಿ ಮಾರ್ಗವಾಗಿ ತೆರಳುತ್ತಿದ್ದ ಕೆ ಎಸ್ ಆರ್ ಟಿ ಸಿ ಬಸ್ ಜಲದುರ್ಗ ಗ್ರಾಮದ ಬಳಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಸಮೀಪದ ಕೆಳಭಾಗದಲ್ಲಿನ ಮನೆಯ ಮೇಲೆ ಉರುಳಿ ಬಿದ್ದಿದೆ.
ಬಸ್ಸಿನಲ್ಲಿ 50 ಜನ ಪ್ರಯಾಣಿಕರು ಇದ್ದು, 20 ಜನರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಗಾಯಾಳುಗಳನ್ನು ಜಯಪುರ ಮತ್ತು ಕೊಪ್ಪ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಸಂಬಂಧ ಜಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.