Published
3 days agoon
By
Akkare Newsಪುತ್ತೂರು: ಏ.10 ರಿಂದ 20 ರ ತನಕ ನಡೆಯುವ ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಧ್ವಜಾರೋಹಣ ಗುರುವಾರ ಬೆಳಿಗ್ಗೆ ಸಾವಿರಾರು ಭಕ್ತಾದಿಗಳ ಜಯಘೋಷದೊಂದಿಗೆ ನಡೆಯಿತು.
ಬೆಳಿಗ್ಗೆ ಶ್ರೀ ದೇವಸ್ಥಾನದಲ್ಲಿ ಪ್ರಧಾನ ಅರ್ಚಕ ವಿ.ಎಸ್. ಭಟ್ ಅವರು ವೈದಿಕ ವಿಧಾನಗಳನ್ನು ನೆರವೇರಿಸಿದರು. ಅರ್ಚಕ ವಸಂತ ಕೆದಿಲಾಯ ಸಹಕರಿಸಿದರು. ಬಳಿಕ ಭಕ್ತಾದಿಗಳ ಜಯಘೋಷದೊಂದಿಗೆ ಧ್ವಜಾರೋಹಣ ನಡೆಯಿತು.
ಈ ಸಂದರ್ಭದಲ್ಲಿ ಶಾಸಕ ಅಶೋಕ್ ಕುಮಾರ್ ರೈ, ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪಂಜಿಗುಡ್ಡೆ ಈಶ್ವರ ಭಟ್, ಸದಸ್ಯರಾದ ಮಹಾಬಲ ರೈ ಒಳತ್ತಡ್ಕ, ಪಿ.ವಿ.ದಿನೇಶ್ ಕುಲಾಲ್, ವಿನಯ ಕುಮಾರ್ ಸುವರ್ಣ, ಸುಭಾಸ್ ರೈ ಬೆಳ್ಳಿಪ್ಪಾಡಿ, ಈಶ್ವರ ನಾಯ್ಕ ಬೆಡೇಕರ್, ನಳಿನಿ ಪಿ. ಶೆಟ್ಟಿ, ಕೃಷ್ಣವೇಣಿ, ಕಾರ್ಯನಿರ್ವಹಣಾಧಿಕಾರಿ ಶ್ರೀನಿವಾಸ್ ಕೆ.ವಿ., ವಾಸ್ತು ಇಂಜಿನಿಯರ್ ಪಿ.ಜಿ.ಜಗನ್ನಿವಾಸ ರಾವ್, ಕರಸೇವಕರು, ಭಕ್ತಾದಿಗಳು ಉಪಸ್ಥಿತರಿದ್ದರು.
.