Published
2 days agoon
By
Akkare Newsಅಹಮದಾಬಾದ್: ಪಕ್ಷ ನೀಡಿದ ಜವಾಬ್ದಾರಿ ನಿರ್ವಹಿಸಲು ಸಾಧ್ಯವಾಗದವರು ನಿವೃತ್ತಿ ಹೊಂದಲಿ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಎಚ್ಚರಿಕೆ ನೀಡಿದ್ದಾರೆ.
ಅಹಮದಾಬಾದ್ನಲ್ಲಿ ಬುಧವಾರ ಪೂರ್ಣಗೊಂಡ ಎರಡು ದಿನಗಳ ಕಾಂಗ್ರೆಸ್ ರಾಷ್ಟ್ರೀಯ ಕಾರ್ಯಕಾರಿಣಿಯಲ್ಲಿ ಅವರು ಮಾತನಾಡುತ್ತಿದ್ದರು.
ಪಕ್ಷದ ಬಲವರ್ಧನೆ ಹಾಗೂ ಸಂಘಟನೆಯಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿಗಳ ಅಧ್ಯಕ್ಷರ ಪಾತ್ರ ದೊಡ್ಡದಿದೆ. ಹಾಗಾಗಿ, ಎಐಸಿಸಿ ಮಾರ್ಗಸೂಚಿಯಂತೆ ಜಿಲ್ಲಾಧ್ಯಕ್ಷರ ನೇಮಕವನ್ನು ಕಟ್ಟುನಿಟ್ಟಾಗಿ ಮತ್ತು ನಿಷ್ಪಕ್ಷಪಾತವಾಗಿ ಮಾಡಬೇಕು ಎಂದು ಹೇಳಿದರು.
.
ಜಿಲ್ಲಾಧ್ಯಕ್ಷರಾಗಿ ನೇಮಕಗೊಂಡ ಒಂದು ವರ್ಷದೊಳಗೆ ಅವರು ಜನರನ್ನು ಸೇರಿಸಿಕೊಂಡು ಬೂತ್ ಸಮಿತಿ, ಮಂಡಲ್ ಸಮಿತಿ, ಬ್ಲಾಕ್ ಸಮಿತಿ ಮತ್ತು ಜಿಲ್ಲಾ ಸಮಿತಿಗಳನ್ನು ರಚಿಸಿ ಪಕ್ಷದ ಬಲವರ್ಧನೆಗೆ ಮುಂದಾಗಬೇಕು. ಭವಿಷ್ಯದಲ್ಲಿ ಚುನಾವಣಾ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಪ್ರಕ್ರಿಯೆಯಲ್ಲಿ ಜಿಲ್ಲಾಧ್ಯಕ್ಷರು ಪಾಲ್ಗೊಳ್ಳಲಿದ್ದಾರೆ ಎಂದರು.